ಬೆಂಗಳೂರು : ಮೀಸಲಾತಿ ಹೆಚ್ಚಳದ ನಿರೀಕ್ಷೆಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಸಮುದಾಯಕ್ಕೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಎಸ್ ಸಿ, ಎಸ್ ಟಿ ಮೀಸಲಾತಿ ಹೆಚಚಳ ಸಂಬಂಧ ಕಾನೂನಾತ್ಮಕವಾಗಿ ತೀರ್ಮಾಣ ಕೈಗೊಳ್ಳುವ ಕುರಿತು ಚರ್ಚಿಸಲು ವಾರದೊಳಗೆ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
BIGG NEWS : ದೇವನೂರು ಮಹಾದೇವ ಸೇರಿ 7 ಲೇಖಕರ ಗದ್ಯ-ಪದ್ಯಗಳನ್ನು ಪಠ್ಯದಿಂದ ಕೈಬಿಡಲು ರಾಜ್ಯ ಸರ್ಕಾರ ಆದೇಶ
ಸದನದಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಎಸ್ ಸಿ-ಎಸ್ ಟಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾ. ನಾಗಮೋಹನ್ ದಾಸ್ ಸಮಿತಿ ಮತ್ತು ಮಾಜಿ ಉಪಲೋಕಾಯುಕ್ತ ನ್ಯಾ. ಸುಭಾಷ್ ಅಡಿ ಸಮಿತಿ ವರದಿಗಳು ಸಲ್ಲಿಕೆಯಾಗಿವೆ. ಸಂವಿಧಾನಾತ್ಮಕ ಮತ್ತು ಕಾನೂನಾತ್ಮಕ ವಿಚಾರವಾಗಿರುವ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆ ಕರೆದು ಚರ್ಚಿಸಿ ಮುಂದಿನ ಹೆಜ್ಜೆ ಇಡಲಾಗುವುದು ಎಂದು ತಿಳಿಸಿದ್ದಾರೆ.
BIGG NEWS : `CET’ ಬಿಕ್ಕಟ್ಟು ಶಮನ : ಸೆ. 29 ರಂದು ಪರಿಷ್ಕೃತ `RANKING’ ಪಟ್ಟಿ ಪ್ರಕಟ