ಚಿಕ್ಕಬಳ್ಳಾಪುರ : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಿಕ್ಕಬಳ್ಳಾಪುರ ಇವರ ವತಿಯಿಂದ 2021-22 & 2022-23ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡದ ಉಪಯೋಜನೆಯಡಿ ಉದ್ಯೋಗಿನಿ ಯೋಜನೆಯಡಿ ಜಿಲ್ಲೆಗೆ 11 ಗುರಿ ನಿಗಧಿ ಪಡಿಸಿದ್ದು, ಸಾಲ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.
BIGG NEWS : ನಾಳೆಯಿಂದ ರಾಜ್ಯದ ಹೈಕೋರ್ಟ್ ಗಳಿಗೆ ಚಳಿಗಾಲದ ರಜೆ ಘೋಷಣೆ
ಪರಿಶಿಷ್ಟ ಪಂಗಡಕ್ಕೆ ಸೇರಿದ 18-55 ವಯಸ್ಸಿನ ಮಹಿಳೆಯರು ಸ್ವ-ಉದ್ಯೋಗ ಕೈಗೊಳ್ಳಲು ಬ್ಯಾಂಕ್ ಸಾಲ ರೂ.3.00 ಲಕ್ಷಕ್ಕೆ ಶೇ.50%ರಷ್ಟು ಸಹಾಯಧನ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, #ನೂತನ ಜಿಲ್ಲಾಡಳಿತ ಭವನ, 1ನೇ ಮಹಡಿ, ಕೊಠಡಿ ಸಂಖ್ಯೆ:ಎಫ್ಬಿ-05, ಶಿಡ್ಲಘಟ್ಟ ರಸ್ತೆ, ಚಿಕ್ಕಬಳ್ಳಾಪುರ. ಇಲ್ಲಿ ಅರ್ಜಿಗಳನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು (ದ್ವಿಪ್ರತಿಗಳಲ್ಲಿ) ದಿನಾಂಕ:31.12.2022ರ ಒಳಗಾಗಿ ಸದರಿ ಕಛೇರಿಗೆ ಸಲ್ಲಿಸಲು ತಿಳಿಸಲಾಗಿದೆ. ಆಯ್ಕೆ ಪ್ರಕ್ರಿಯೆ ಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಾಡಲಾಗುತ್ತದೆ.
WATCH VIDEO: ಬೆಂಗಳೂರು-ಉಡುಪಿ ನಡುವಿನ ರೈಲು ಸಂಚಾರದ ಅದ್ಭುತ ವಿಡಿಯೋ ವೈರಲ್
ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನೂತನ ಜಿಲ್ಲಾಡಳಿತ ಭವನ, ಚಿಕ್ಕಬಳ್ಳಾಪುರ ಇಲ್ಲ್ಲಿ ಸಂಪರ್ಕಿಸುವುದು. ದೂರವಾಣಿ ಸಂಖ್ಯೆ:08156-277111 ನ್ನು ಸಂಪರ್ಕಿಸಬಹುದೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅಶ್ವತ್ಥಮ್ಮ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.