ಬೆಂಗಳೂರು : ರಾಜ್ಯ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯಲ್ಲಿ ಫೈರ್ ಮನ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಫೈರ್ ಮನ್ ಗಳಿಗೆ ನೇಮಕಾತಿ ಪತ್ರ ವಿತರಿಸಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ.
BIGG NEWS : ವಿದ್ಯಾರ್ಥಿಗಳೇ ಗಮನಿಸಿ : ಜು.18ರಿಂದ `BMTC’ಯಿಂದ ವಿದ್ಯಾರ್ಥಿ ರಿಯಾಯಿತಿ ಪಾಸ್ ವಿತರಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅಗ್ನಿಶಾಮಕ ದಳ ಹಾಗೂ ತುರ್ತು ಸೇವೆಗಳ ಇಲಾಖೆಯಲ್ಲಿ ಒಟ್ಟು 7,057 ವಿವಿಧ ಶ್ರೇಣಿಯ ಹುದ್ದೆಗಳಿದ್ದು, 2021 ನೇ ವರ್ಷದ ಅಂತ್ಯಕ್ಕೆ ಸುಮಾರು 2,627 ಹುದ್ದೆಗಳು ಖಾಲಿ ಇವೆ. ಪ್ರಸಕ್ತ 1,567 ಹುದ್ದೆಗಳ್ನು ಭರ್ತಿ ಮಾಡಲಾಗುತ್ತಿದೆ. ಇದರಲ್ಲಿ ಮೊದಲ ಹಂತವಾಗಿ ಫೈರ್ ಮನ್ ಹುದ್ದೆಗಳ ನೇಮಕಾತಿ ನಡೆದಿದೆ.ಉಳಿ ಅಭ್ಯರ್ಥಿಗಳಿಗೆ ಶೀಘ್ರವೇ ನೇಮಕಾತಿ ಪತ್ರ ವಿತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
BIGG NEWS : ವಿದ್ಯಾರ್ಥಿಗಳೇ ಗಮನಿಸಿ : ಜು.18ರಿಂದ `BMTC’ಯಿಂದ ವಿದ್ಯಾರ್ಥಿ ರಿಯಾಯಿತಿ ಪಾಸ್ ವಿತರಣೆ