ಬೆಂಗಳೂರು : ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ವರಮಹಾಲಕ್ಷ್ಮಿ ಹಬ್ಬದ ಗಿಫ್ಟ್ ನೀಡಿದ್ದು, ವೇತನ ಹಾಗೂ ಭತ್ಯೆ ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಅದ್ರಂತೆ, 6ನೇ ವೇತನ ಆಯೋಗ ಶಿಫಾರಸಿನಂತೆ ಈ ತಿಂಗಳಿಂದ ಜಾರಿಗೆ ಬರುವಂತೆ ವೇತನ ಹಾಗೂ ಭತ್ಯೆ ಹೆಚ್ಚಾಗಲಿದೆ.
ಅಂದ್ಹಾಗೆ, 6ನೇ ವೇತನ ಆಯೋಗ 2018ರಲ್ಲಿ ಕೆಲ ನಿರ್ದಿಷ್ಟ ಸರ್ಕಾರಿ ನೌಕರರ ವೇತನ ಹಾಗೂ ಭತ್ಯೆಗಳನ್ನ ಮೇಲ್ದರ್ಜೆಗೇರಿಸುವಂತೆ ಶಿಫಾರಸು ಮಾಡಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸಮಿತಿಯೊಂದನ್ನ ರಚಿಸಿತ್ತು. ಸಧ್ಯ ಸಮಿತಿ ವರದಿಯನ್ನ ನೀಡಿದ್ದು, ರಾಜ್ಯ ಸರ್ಕಾರ ವೇತನ ಪರಿಷ್ಕರಣೆ ಆದೇಶ ಹೊರಡಿಸಿದೆ. ಅಂದ್ಹಾಗೆ, ಆಗಸ್ಟ್ 1ರಿಂದಲೇ ಅನ್ವಯವಾಗುವಂತೆ ಈ ಪರಿಷ್ಕೃತ ವೇತನ, ಭತ್ಯೆ ಆದೇಶ ಜಾರಿಗೆ ಬರಲಿದೆ.