ವರದಿ : ವಸಂತ ಬಿ ಈಶ್ವರಗೆರೆ
ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನಿರ್ದಿಷ್ಟ ವೃಂದದ ಹುದ್ದೆಗಳ ವೇತನ ಶ್ರೇಣಿಗಳನ್ನು ರಾಜ್ಯ ಸರ್ಕಾರ ಮೇಲ್ದರ್ಜೆಗೇರಿಸಿದೆ. ಅಲ್ಲದೇ 6ನೇ ರಾಜ್ಯ ವೇತನ ಆಯೋಗದ ವರದಿಯ 2ನೇ ಸಂಪುಟದಲ್ಲಿನ ಶಿಫಾರಸ್ಸುಗಳಂತೆ ಪರಿಷ್ಕರಿಸಿದೆ. ಈ ಮೂಲಕ ರಾಜ್ಯದ ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಿದೆ.
ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಗಳನ್ನು ಹೊರಡಿಸಿದ್ದು, 6ನೇ ರಾಜ್ಯ ವೇತನ ಆಯೋಗವು ತನ್ನ ವರದಿಯ 2ನೇ ಸಂಪುಟದಲ್ಲಿ, ವಿವಿಧ ಇಲಾಖೆಗಳ ನಿರ್ದಿಷ್ಟ ವೃಂದದ ಹುದ್ದೆಗಳ ವೇತನ ಶ್ರೇಣಿಗಳನ್ನು ಮೇಲ್ದರ್ಜೆಗೇರಿಸುವಂತೆ ಮತ್ತು ನಿರ್ದಿಷ್ಟ ವೃಂದಗಳಿಗೆ ವಿಶೇಷ ಭತ್ಯೆಗಳನ್ನು ಮಂಜೂರು ಮಾಡುವಂತೆ ಶಿಫಾರಸ್ಸು ಮಾಡಿದೆ ಎಂದು ತಿಳಿಸಿದ್ದಾರೆ.
ಈ ಹಿನ್ನಲೆಯಲ್ಲಿ ವಿವಿಧ ಇಲಾಖೆಗಳ ನಿರ್ಧಿಷ್ಟ ವೃಂದದ ಹುದ್ದೆಗಳ ವೇತನ ಶ್ರೇಣಿಗಳನ್ನು ಮೇಲ್ದರ್ಜೆಗೇರಿಸಲಾಗಿದೆ. 2018ರ ಪರಿಷ್ಕೃತ ವೇತನ ಶ್ರೇಣಿಗಳ ಪ್ರಸಕ್ತ ವೇತನ ಶ್ರೇಣಿಯನ್ನು ಮೇಲ್ದರ್ಜೆಗೇರಿಸಲು ರಾಜ್ಯ ಸರ್ಕಾರವು ಹರ್ಷಿಸುತ್ತದೆ ಎಂದು ತಿಳಿಸಿದ್ದಾರೆ.
ಹೀಗಿದೆ ವಿವಿಧ ಇಲಾಖೆಗಳ ನಿರ್ದಿಷ್ಟ ವೃಂದದ ಹುದ್ದೆಗಳ ಪರಿಷ್ಕೃತ ವೇತನ ಶ್ರೇಣಿ