ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ (Transfer of teachers) ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಶಿಕ್ಷಕರ ವರ್ಗಾವಣೆಗೆ ಕರಡು ನಿಯಮ ಪ್ರಕಟವಾಗಲಿದೆ.
BIG NEWS : ಉಕ್ರೇನ್ನ ಪೋಲೆಂಡ್ನಲ್ಲಿ ರಷ್ಯಾ ಕ್ಷಿಪಣಿ ದಾಳಿ: ಇಬ್ಬರು ಸಾವು
ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಅನುಮೋದನೆಗೊಂಡ ಶಿಕ್ಷಕರ ವರ್ಗಾವಣೆ ತಿದ್ದುಪಡಿ ಕಾಯ್ದೆ 2022 ಸಂಬಂಧ ಶಿಕ್ಷಣ ಇಲಾಖೆ ಕರಡು ನಿಯಮಾವಳಿ ಸಿದ್ಧಪಡಿಸಿದ್ದು, ಶೀಘ್ರವೇ ಪ್ರಕಟವಾಗಲಿದೆ. ಕರಡು ನಿಯಮಾವಳಿಗೆ ಆಕ್ಷೇಪಣೆ ಸ್ವೀಕರಿಸಿದ ಬಳಿಕ ಶಿಕ್ಷಕರ ವರ್ಗಾವಣೆಗೆ ಅಂತಿಮ ಅಧಿಸೂಚನೆ ಮತ್ತು ವೇಳಾಪಟ್ಟಿ ಪ್ರಕಟವಾಗಲಿದೆ.
ನಿಯಮ ಪ್ರಕಾರ ಪ್ರತಿ ವರ್ಷ ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನ ಶಿಕ್ಷಕರ ವರ್ಗಾವಣೆ ಪೂರ್ಣಗೊಳಿಸಬೇಕು. ಆದರೆ ಇತ್ತೀಚಿನ ವರ್ಷಗಳಲ್ಲಿ ಇದು ಮರಿಚಿಕಿಯಾಗಿದೆ. ಶೈಕ್ಷಣಿಕ ವರ್ಷ ಆರಂಭವಾದ ಬಳಿಕ ವರ್ಗಾವಣೆ ನಡೆಸಿಕೊಂಡು ಬರಲಾಗಿದೆ. ಇನ್ಮುಂದೆ ಮುಂದಿನ ಶೈಕ್ಷಣಿಕ ವರ್ಷ ಆರಂಭಕ್ಕೂ ಮೊದಲೇ ಅಂದರೆ 2023 ರ ಜೂ.1ರೊಳಗೆ ವರ್ಗಾವಣೆ ಪ್ರಕ್ರಿಯೆ ನಡೆಸಲು ಇಲಾಖೆ ಸಿದ್ಧತೆ ನಡೆಸುತ್ತಿದೆ.
BIGG NEWS : 15 ಸಾವಿರ ಶಿಕ್ಷಕರ ನೇಮಕಾತಿ : ಈ ವಾರ 1:1 `ತಾತ್ಕಾಲಿಕ ಆಯ್ಕೆ ಪಟ್ಟಿ’ ಬಿಡುಗಡೆ