ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಡಿಸೆಂಬರ್ ಮೊದಲ ವಾರದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ.

BIGG NEWS : ಇಂದು ಸಂಭವಿಸುವ ವರ್ಷದ ಕೊನೆಯ ಚಂದ್ರಗ್ರಹಣದ ಕುರಿತು ಇಲ್ಲಿದೆ ಮಹತ್ವದ ಮಾಹಿತಿ|Lunar Eclipse-2022

ಡಿಸೆಂಬರ್ ಮೊದಲ ವಾರದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ಸಾಮಾನ್ಯ ವರ್ಗಾವಣೆ ಆರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಈಗಾಗಲೇ ಅಧಿವೇಶನದಲ್ಲಿ ಅನುಮೋದನೆ ಪಡೆದುಕೊಂಡಿರುವ ಶಿಕ್ಷಕರ ವರ್ಗಾವಣೆ ತಿದ್ದುಪಡಿ ಕಾಯ್ದೆ ಅನ್ವಯವೇ ಪ್ರಕ್ರಿಯೆ ನಡೆಯಲಿದ್ದು, ಅದಕ್ಕೆ ಬೇಕಾದ ನಿಯಮ ರೂಪಿಸುವ ಕೆಲಸವೂ ಮುಕ್ತಾಯವಾಗಿದ್ದು, ಡಿಸೆಂಬರ್ ಮೊದಲ ವಾರದಲ್ಲಿ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ.

BIGG NEWS : ಹೊಸದಾಗಿ `BPL’ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಬಿಗ್ ಶಾಕ್ : `ಪಡಿತರ ಕಾರ್ಡ್’ ಸಿಗದೇ ಬಡವರ ಪರದಾಟ

ಇನ್ನು ಶಿಕ್ಷಕರು ಈವರೆಗೆ ಒಂದು ಬಾರಿ ಮಾತ್ರ ವರ್ಗಾವಣೆಗೆ ಅರ್ಜಿ ಸಲ್ಲಿಸಬಹುದಿತ್ತು. ಆದರೆ ನಿಯಮಗಳಿಗೆ ತಿದ್ದುಪಡಿ ತಂದು ಸೇವೆಗೆ ಸೇರಿದ ಮೊದಲ 5 ವರ್ಷ ಮತ್ತು ನಿವೃತ್ತಿ ಹೊಂದಲು 5 ವರ್ಷ ಉಳಿದಿರುವ ಸಂದರ್ಭ ಹೊರತುಪಡಿಸಿ ಉಳಿದ ಅವಧಿಯಲ್ಲಿ ಪ್ರತಿ ಮೂರು ವರ್ಷಕ್ಕೊಮ್ಮೆ ಎಷ್ಟು ಬಾರಿ ಬೇಕಾದರೂ ಅರ್ಜಿ ಸಲ್ಲಿಸಬಹುದು.

BIGG NEWS : ರಾಜ್ಯದ 7 ಹೊಸ ವಿಶ್ವವಿದ್ಯಾಲಯಗಳ ಸ್ಥಾಪಿಸಿ ರಾಜ್ಯ ಸರ್ಕಾರದಿಂದ ಅಧಿಸೂಚನೆ

Share.
Exit mobile version