ಬೆಂಗಳೂರು : ವರ್ಗಾವಣೆಯ ನಿರೀಕ್ಷೆಯಲ್ಲಿ ಸರ್ಕಾರಿ ಶಾಲಾ ಶಿಕ್ಷಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ಸಿಕ್ಕಿದ್ದು, ನಾಳೆಯಿಂದ ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ.
ಸರ್ಕಾರಿ ಶಿಕ್ಷಕರ ವರ್ಗಾವಣೆಗೆ ಕಾಯ್ದೆಗೆ ತಿದ್ದುಪಡಿ ತಂದು ಅಂತಿಮ ನಿಯಮಾವಳಿ ಪ್ರಕಟಿಸಿದ ಬೆನ್ನಲ್ಲೇ ಶಿಕ್ಷಣ ಇಲಾಖೆ ವರ್ಗಾವಣೆಗೆ ವೇಳಾಪಟ್ಟಿ ಪ್ರಕಟಿಸಿದೆ. ಡಿಸೆಂಬರ್ 28 ರಿಂದ ಫೆಬ್ರವರಿ 28 ರವರೆಗೆ ವರ್ಗಾವನೆ ಪ್ರಕ್ರಿಯೆ ನಡೆಯಲಿದೆ. ಈ ಮೂಲಕ ಮುಂದಿನ ಶೈಕ್ಷಣಿಕ ವರ್ಷ ಆರಂಭಕ್ಕೂ ಮೊದಲೇ ವರ್ಗಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.
ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ವೃಂದಕ್ಕೆ ಡಿಸೆಂಬರ್ 28 ರಂದು ಹೆಚ್ಚುವರಿ ಶಿಕ್ಷಕರ ಕರಡು ಪಟ್ಟಿ ಪ್ರಕಟವಾಗಲಿದೆ. ಆಕ್ಷೇಪಣೆಗಳಿದ್ದಲ್ಲಿ ಶಿಕ್ಷಕರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಡಿಸೆಂಬರ್ 30 ರೊಳಗೆ ಸಲ್ಲಿಸಬೇಕು. ಡಿಸೆಂಬರ್ 31 ರೊಳಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆಕ್ಷೇಪಣೆ ಅಂಗೀಕಾರ, ತಿರಸ್ಕಾರ ಪೂರ್ಣಗೊಳಿಸಬೇಕು. ಶಿಕ್ಷಕರ ಸಮಸ್ಯೆಗಳಿದ್ದರೆ ಜನವರಿ 2 ರೊಳಗೆ ಕುಂದುಕೊರತೆ ನಿವಾರಣಾ ಅಧಿಕಾರಿಗಳನ್ನು ಸಂಪರ್ಕಿಸಬೇಕು ಎಂದು ಸೂಚನೆ ನೀಡಿದೆ.