ಬೆಂಗಳೂರು : ರಾಜ್ಯದ ಎ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು, ಈ ಬಾರಿ ವಾರ್ಗಾವಣೆ ಪ್ರಕ್ರಿಯೆಲ್ಲಿ ಎ ವಲಯದ ಶಿಕ್ಷಕರನ್ನು ಬಿ ಅಥವಾ ಸಿ ವಲಯಕ್ಕೆ ವರ್ಗಾವನೆ ಮಾಡುದಿಲ್ಲ ಎಂದು ತಿಳಿಸಿದೆ.
ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಎಲ್ಲಾ ಸಿದ್ಧತೆ ಮಾಡಿಕೊಂಡು ನಿಯಮ ರೂಪಿಸಲಾಗುತ್ತಿದೆ. ನಿಯಮ ರೂಪಗೊಂಡ ಬಳಿಕ ಒಂದು ವಾರದಲ್ಲಿ ಅಧಿಸೂಚನೆ ಹೊರ ಬೀಳುವ ಸಾಧ್ಯತೆ ಇದ್ದು, ಎ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪಾಥಮಿಕ ಹಾಗೂ ಪ್ರೌಢಶಾಲೆ ಶಿಕ್ಷಕರಿಗೆ ಈ ಬಾರಿ ವರ್ಗಾವಣೆ ಪ್ರಕ್ರಿಯೆಯಲ್ಲಿ ಬಿ ಅಥವಾ ಸಿ ವಲಯಕ್ಕೆ ವರ್ಗಾವಣೆ ಮಾಡುವುದಿಲ್ಲ. ಶಿಕ್ಷಕರು ಬಯಸಿದ್ದಲ್ಲಿ ಮಾತ್ರವೇ ಸಿ ವಲಯಗಳಿಗೆ ವರ್ಗಾವಣೆ ಆಗಲು ಅನುವು ಮಾಡಿಕೊಡಲಾಗುತ್ತದೆ.
ಹೊಸದಾಗಿ ನೇಮಕಗೊಳ್ಳುವ ಶಿಕ್ಷಕರು ಮೊದಲ 10 ವರ್ಷದ ಅವಧಿಗೆ ಸಿ ವಲಯದಲ್ಲಿ ಕೆಲಸ ಮಾಡಬೇಕು ಎಂಬ ನಿಯಮವಿದೆ. ಆದ್ದರಿಂದ ಈಗ ನಡೆಯುತ್ತಿರುವ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗಲಿರುವ 13,363 ಶಿಕ್ಷಕರನ್ನು ಮೊದಲ 10 ವರ್ಷದ ಅವಧಿಗೆ ಸಿ ವಲಯದಲ್ಲಿ ಸ್ಥಳ ನಿಯೋಜನೆ ಮಾಡಲಾಗುತ್ತದೆ. ಹೀಗಾಗಿ ಈ ಬಾರಿ ಎ ವಲಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ ಬಿ ಅಥವಾ ಸಿ ವಲಯಗಳಿಗೆ ವರ್ಗಾವಣೆ ಮಾಡುವುದಿಲ್ಲ ಎನ್ನಲಾಗಿದೆ.