ಬೆಂಗಳೂರು : ಬಿಬಿಎಂಪಿ ಕಲ್ಯಾಣ ವಿಭಾಗದಿಂದ ಒಂಟಿ ಮನೆ, ವಿದ್ಯಾರ್ಥಿಗಳಿಗ ಲ್ಯಾಪ್ ಟ್ಯಾಪ್ ಗೆ ಸೇರಿ ವಿವಿಧ ಯೋಜನೆಗಳಿಗೆ ಅರ್ಹ ಫಲಾನುಭವಿಗಳಿಂದ ಆಹ್ವಾನಿಸಲಾಗಿದ್ದ ಅರ್ಜಿ ಸಲ್ಲಿಕೆ ಅವಧಿಯನ್ನು ಅ.19 ರವರೆಗೆ ವಿಸ್ತರಿಸಲಾಗಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಕಲ್ಯಾಣ ಕಾರ್ಯಕ್ರಮಗಳಡಿಯಲ್ಲಿ ಈ ಕೆಳಕಂಡ ಕಾರ್ಯಕ್ರಮಗಳಿಗೆ ಆನ್ಲೈನ್ ಮುಖಾಂತರ ಅರ್ಜಿಗಳನ್ನು ಆಹ್ವಾನಿಸಲಾಗುತ್ತಿದೆ. ಈ ಸಂಬಂಧ ಅರ್ಜಿಗಳನ್ನು ಸಲ್ಲಿಸಲು ದಿನಾಂಕ: 19-09-2022 ರನ್ನು ಕೊನೆ ದಿನಾಂಕವಾಗಿ ನಿಗಧಿಪಡಿಸಿರುವುದನ್ನು ಮುಂದುವರೆಸಿ ದಿನಾಂಕ: 19-10-2022ರವರೆಗೆ ವಿಸ್ತರಿಸಿದೆ.
- ಪಾಲಿಕೆಯ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿರುವವರಿಗೆ ಮನೆ ನಿರ್ಮಾಣ ಮಾಡಿಕೊಳ್ಳಲು ರೂ .5.00 ಲಕ್ಷಗಳ ಸಹಾಯಧನ
- ಪದವಿ ಪೂರ್ವ, ಪದವಿ ಹಾಗೂ ಸ್ನಾತಕೊತ್ತರ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವ್ಯಾಸಂಗಕ್ಕೆ ಅನುಕೂಲವಾಗಲು ಉಚಿತ ಲ್ಯಾಪ್ಟಾಪ್.
- ಅಂಧರಿಗೆ ಸ್ಮಾರ್ಟ್ ಸ್ಟಿಕ್.
- ಅಂಧ ವಿದ್ಯಾರ್ಥಿಗಳಿಗೆ ಎಜುಕೇಷನಲ್ ಲ್ಯಾಪ್ಟಾಪ್.
- ಹಿರಿಯ ನಾಗರೀಕರಿಗೆ ಮಡಚುಬಹುದಾದ ವೀಲ್ ಚೇರ್.
ಆಸ್ತಕರು ಪಾಲಿಕೆಯ ವೆಬ್ ಜಾಲತಾಣವಾದ https://welfare.bbmpgov.in/ ಮುಖಾಂತರ ಉಚಿತವಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ. ಅಥವಾ ಬೆಂಗಳೂರು ಒನ್ ಕೇಂದ್ರದಲ್ಲಿ ರೂ. 30/- ಶುಲ್ಕವನ್ನು ಪಾವತಿಸಿ ಆನ್ಲೈನ್ ಮೂಖೇನ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಎಲ್ಲಾ ವಲಯದ ಜಂಟಿ ಆಯುಕ್ತರವರ ಕಛೇರಿಯಲ್ಲಿ ಸಹಾಯ ಕೇಂದ್ರವನ್ನು ಸ್ಥಾಪಿಸಿದ್ದು ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.