ಬೆಂಗಳೂರು : ವಸತಿ ರಹಿತ ಬಡಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದ್ದು, ಬಸವ ವಸತಿ ಯೋಜನೆಗೆ ಗ್ರಾಮಪಂಚಾಯಿತಿ ಮಟ್ಟದಲ್ಲೇ ಫಲಾನುಭವಿಗಳನ್ನು ಆಯ್ಕೆ ಮಾಡಬಹುದು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಜೆಡಿಎಸ್ ನ ಎಂ.ವಿ. ವೀರಭದ್ರಯ್ಯ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಸವ ವಸತಿ ಯೋಜನೆಗೆ ರಾಜ್ಯ ಸರ್ಕಾರವೇ ಹಣ ನೀಡುತ್ತದೆ. ಹೀಗಾಗಿ ಪಂಚಾಯಿತಿ ಮಟ್ಟದಲ್ಲೇ ಫಲಾನುಭವಿಗಳನ್ನು ಆಯ್ಕೆ ಮಾಡಬಹುದು ಎಂದು ಹೇಳಿದ್ದಾರೆ.
ಇನ್ನು ಪ್ರಧಾನಮಂತ್ರಿ ಆವಾಸ್ ಯೋಜನೆ ಕೇಂದ್ರ ಸರ್ಕಾರ ಹಣ ಕೊಡುತ್ತದೆ. ಹಾಗಾಗಿ ಅದನ್ನು ಹೊರತುಪಡಿಸಿ ರಾಜ್ಯ ಸರ್ಕಾರದ ಅನುದಾನಿತ ವಸತಿ ಯೋಜನೆಗಳಿಗೆ ಪಂಚಾಯಿತಿ ಮಟ್ಟದಲ್ಲೇ ಫಲಾನುಭವಿಗಳನ್ನು ಆಯ್ಕೆ ಮಾಡಬಹುದು ಎಂದು ತಿಳಿಸಿದ್ದಾರೆ.