ಉಡುಪಿ : ವಿದ್ಯುತ್ ದರ ಏರಿಕೆಯ ಬೆನ್ನಲ್ಲೇ ರಾಜ್ಯದ ಜನತೆಗೆ ಇಂಧನ ಸಚಿವ ವಿ. ಸುನಿಲ್ ಕುಮಾರ್ ಸಿಹಿಸುದ್ದಿ ನೀಡಿದ್ದು, ವಿದ್ಯುತ್ ದರ ಏರಿಕೆಯ ನಿಯಮ ವಾಪಸ್ ಪಡೆಯುವ ಚಿಂತನೆ ಇದೆ ಎಂದು ಹೇಳಿದ್ದಾರೆ.
ವಿದ್ಯುತ್ ದರ ಏರಿಕೆ ನಿಯಮ ವಾಪಸ್ ಪಡೆಯುವ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಅಗತ್ಯವಾದರೆ ವಿದ್ಯುತ್ ದರ ಏರಿಕೆ ನಿಯಾಮಾವಳಿ ಹಿಂಪಡೆಯಲಾಗುವುದು. ವಿದ್ಯುತ್ ದರ ಏರಿಕೆಗೆ ನಮ್ಮ ಸರ್ಕಾರ ಹೊಸ ನಿಯಮಾವಳಿ ರೂಪಿಸಿಲ್ಲ. 2014 ರಲ್ಲಿ ಕಲ್ಲಿದ್ದಲು ಬೆಲೆ ಹೊಂದಾಣಿಕೆಗೆ ರೂಪಿಸಲಾಗಿದ್ದ ನಿಯಮಾವಳಿಯೇ ಮುಂದುವರೆದಿದೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ತಂದ ಈ ಪದ್ಧತಿಯಿಂದ ಜನರಿಗೆ ಹೊರೆಯಾಗುತ್ತಿದೆ. ಸಾಧಕ-ಬಾಧಕಗಳ ಕುರಿತು ಮುಖ್ಯಮಂತ್ರಿಗಳ ಜೊತೆಗೆ ಚರ್ಚಿಸುತ್ತೇನೆ. ಅಗತ್ಯವಾದರೆ ಈ ನಿಯಮಾವಳಿ ಹಿಂದಕ್ಕೆಪಡೆಯಲು ಹಿಂಜರಿಯುವುದಿಲ್ಲ ಎಂದು ಹೇಳಿದ್ದಾರೆ.