ನವದೆಹಲಿ : ಕೇಂದ್ರ ಸರ್ಕಾರವು ರಾಜ್ಯಕ್ಕೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ಕರ್ನಾಟಕದ ಗ್ರಾಮೀಣ ಅಭಿವೃದ್ಧಿಗಾಗಿ ಸ್ಥಳೀಯ ಸಂಸ್ಥೆಗಳಿಗೆ ಕೇಂದ್ರ ಹಣಕಾಸು ಇಲಾಖೆಯು 628 ಕೋಟಿ ರೂ. ಬಿಡುಗಡೆ ಮಾಡಿದೆ.
BIGG NEWS : ಇಂದು ಮಂಗಳೂರಿಗೆ ಪ್ರಧಾನಿ ಮೋದಿ : 3,800 ಕೋಟಿ ರೂ. ಮೊತ್ತದ ಯೋಜನೆಗಳಿಗೆ ಚಾಲನೆ
ಕೇಂದ್ರ ಹಣಕಾಸು ಇಲಾಖೆಯು ದೇಶದ ವಿವಿಧ ರಾಜ್ಯಗಳಿಗೆ ಒಟ್ಟು 4,190 ಕೋಟಿ ರೂ. ಹಣ ಬಿಡುಗಡೆ ಮಾಡಲಾಗಿದ್ದು, ಈ ಪೈಕಿ ಕರ್ನಾಟಕಕ್ಕೆ 628 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. 15ನೇ ಹಣಕಾಸು ಆಯೋಗದ ಶಿಫಾರಸು ಪ್ರಕಾರ ಈ ಅನುದಾನ ಬಿಡುಗಡೆ ಮಾಡಲಾಗಿದೆ.
ಈ ಹಣದ ಒಟ್ಟು ಮೌಲ್ಯದಲ್ಲ ಶೇ 60ರಷ್ಟು ಪ್ರಮಾಣವನ್ನು ಗ್ರಾಮೀಣಾ ಪ್ರದೇಶಗಳ ಸ್ವಚ್ಛತೆ, ಬಯಲು ಶೌಚಾಲಯ ಮುಕ್ತ ಯೋಜನೆಗಳ ಅನುಷ್ಠಾನಕ್ಕೆ ಬಳಸಬೇಕು. ಕುಡಿಯುವ ನೀರು, ಮಳೆ ನೀರು ಕೊಯ್ಲು ಮತ್ತು ನೀರು ಮರುಬಳಕೆಯ ಸೌಕರ್ಯ ಕಲ್ಪಿಸಬೇಕು ಎಂದು ಸೂಚನೆ ನೀಡಿದೆ.