ಧಾರವಾಡ : ವೀರಶೈವ ಲಿಂಗಾಯತ ಸಮುದಾಯದ ಅರ್ಹ ಫಲಾಪೇಕ್ಷಿಗಳಿಂದ ಬಸವ ಬೆಳಗು ಮತ್ತು ವಿದೇಶ ವಿದ್ಯಾ ವಿಕಾಸ ಯೋಜನೆಯಡಿ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.10 ರವರೆಗೆ ವಿಸ್ತರಿಸಲಾಗಿದೆ.
ಅರ್ಹ ಫಲಾಪೇಕ್ಷಿಗಳು ಹತ್ತಿರದ ಗ್ರಾಮ ಒನ್, ಕರ್ನಾಟಕ ಒನ್ ನಾಗರೀಕ ಸೇವಾ ಸಿಎಸ್‍ಸಿ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬೇಕು.
ಅಲ್ಪಾವಧಿ ಕೋರ್ಸುಗಳು: ಯುವ ಜನರಿಗೆ ಅಲ್ಪಾವಧಿ ಕೋರ್ಸ್‍ಗಳ ಮೂಲಕ ಕೌಶಲ್ಯ ತರಬೇತಿ ನೀಡಲು ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯಡಿ ಉದ್ಯೋಗಮುಖಿಯನ್ನಾಗಿಸಲು ಸರ್ಕಾರದ ಸಂಸ್ಥೆಗಳಾದ ಐಟಿಐ, ಜಿಟಿಟಿಸಿ, ಕೆಜಿಟಿಟಿಐ ರಲ್ಲಿ ಅಲ್ಪಾವಧಿ ಕೋರ್ಸುಗಳ ಮೂಲಕ ಉಚಿತ ಕೌಶಲ್ಯ ತರಬೇತಿ ನೀಡಲು ಕೌಶಲ್ಯ ಕರ್ನಾಟಕ ತಂತ್ರಾಂಶದ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತರು https://bcwd.kaushalkar.com ಜಾಲತಾಣದಲ್ಲಿ ಮಾ.31 ರೊಗಳಗೆ ಅರ್ಜಿ ಸಲ್ಲಿಸಬಹುದು. ಈ ಯೋಜನೆಗಳಿಗೆ ಸಂಬಂಧಿಸಿದಂತೆ ನಿಗಮದ ವೆಬ್‍ಸೈಟ್ https://kvldcl.karnataka.gov.in ನಲ್ಲಿ ಹೆಚ್ಚಿ ಮಾಹಿತಿಯನ್ನು ಪಡೆಯಬಹುದು ಎಂದು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.