ದಾವಣಗೆರೆ : 2022-23ನೇ ಸಾಲಿನ ಡಿ. ದೇವರಜ ಅರಸು ಸ್ವಯಂ-ಉದ್ಯೋಗ ಯೋಜನೆಯಡಿ ವೈಯಕ್ತಿಕ ಸಾಲ ಸೌಲಭ್ಯವನ್ನು ಹಾಗೂ ಗಂಗಾ ಕಲ್ಯಾಣ ನೀರಾವರಿ ಯೋಜನೆಯಡಿ ಕೊಳವೆ ಬಾವಿ ಸೌಲಭ್ಯವನ್ನು ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿಗೆ ಸೇರಿದವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಸೌಲಭ್ಯವನ್ನು ಪಡೆಯಲಿಚ್ಚಿಸುವವರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್, ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಜ.5 ರಿಂದ 17ರವರೆಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://www.dbcdc.karnataka.gov.in ಹಾಗೂ ಸಹಾಯವಾಣಿ ಸಂಖ್ಯೆ: 080-22374832 / 8050770004&6 /7090400100 / 7090400900. ಆಯಾ ಜಿಲ್ಲಾ ಕಛೇರಿಯ ದೂರವಾಣಿ ಸಂಖ್ಯೆಗಳನ್ನು ವೆಬ್ಸೈಟ್ನಲ್ಲಿ ನೀಡಲಾಗಿದ್ದು ಅದರಂತೆ ಸಂಪರ್ಕಿಸಬಹುದೆಂದು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BREAKING NEWS: ಬೆಂಗಳೂರಿನಲ್ಲಿ ಕಿಡಿಗೇಡಿಗಳಿಂದ ಭಯಾನಕ ಕೃತ್ಯ; ಮನೆ ಮುಂದೆ ನಿಲ್ಲಿಸಿದ್ದ ಕಾರು, ಬೈಕ್ ಗೆ ಬೆಂಕಿ