ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ನೇರ ನೇಮಕಾತಿ ( Assistant Professor Recruitment ) ಮೂಲಕ ಭರ್ತಿಗೆ ಅರ್ಜಿ ಆಹ್ವಾನಿಸಿ, ಸ್ಪರ್ಧಾತ್ಮಕ ಪರೀಕ್ಷೆ ಕೂಡ ನಡೆಸಿತ್ತು. ಈ ಬಳಿಕ ಅಂತಿಮ ಕೀ ಉತ್ತರ, ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇದೀಗ ಶೀಘ್ರವೇ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂಬುದಾಗಿ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ( Minister Dr CN Ashwathnarayana ) ತಿಳಿಸಿದ್ದಾರೆ.
BIGG BREAKING NEWS : ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆಗೆ ಕೋವಿಡ್ ಪಾಸಿಟಿವ್
ಈ ಕುರಿತಂತೆ ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನಿರೀಕ್ಷೆಯಲ್ಲಿದ್ದಂತ ವಿವಿಧ ಅಭ್ಯರ್ಥಿಗಳು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರನ್ನು ಭೇಟಿ ಮಾಡಿ, ಮನವಿ ಮಾಡಿದ್ದರು. ಈ ವೇಳೆಯಲ್ಲಿ ಮಾರ್ಚ್ ತಿಂಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕಾತಿ ನಡೆಸುವ ಸಲುವಾಗಿ ರಾಜ್ಯದ ವಿವಿಧ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಿತ್ತು. ಈ ಪರೀಕ್ಷೆಯ ಅಂತಿಮ ಕೀ ಉತ್ತರಗಳು ಮತ್ತು ತಾತ್ಕಾಲಿಕ ಅಂಕ ಪಟ್ಟಿಯನ್ನು ಕೆಇಎ ಕಳೆದ ಜುಲೈ 8 ರಂದು ಬಿಡುಗಡೆ ಮಾಡಿತ್ತು. ಇದಾಗಿ ಒಂದು ತಿಂಗಳು ಕಳೆದರೂ ದಾಖಲೆ ಪರಿಶೀಲನೆಗಾಗಿ ಆಯ್ಕೆ ಪಟ್ಟಿ ಬಿಡುಗಡೆ ಮಾಡದೇ ಇರುವುದರಿಂದ ಆತಂಕದಲ್ಲಿದ್ದೇವೆ ಎಂಬುದಾಗಿ ತಮ್ಮ ಅಳಲನ್ನು ತೋಡಿಕೊಂಡಿದ್ದರು.
BIGG NEWS : ರಾಜ್ಯ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ : `ಒಂಟಿ ಮನೆ ಯೋಜನೆ’ ಮತ್ತೆ ಜಾರಿ
ಸಹಾಯಕ ಪ್ರಾಧ್ಯಾಪಕ ಅಭ್ಯರ್ಥಿಗಳು ಬುಧವಾರದಂದು ಉನ್ನತ ಶಿಕ್ಷಣ ಸಚಿವರಾದ ಅಶ್ವಥ್ಥ ನಾರಾಯಣ ಹಾಗೂ ಕೆಇಎ ಯ ನಿರ್ದೇಶಕರಾದ ರಮ್ಯ IAS, ಅವರನ್ನು ಭೇಟಿಯಾಗಿ ಕೆಇಎ ಮೂಲಕ ಪಾರದರ್ಶಕವಾಗಿ ಪರೀಕ್ಷಾ ಪ್ರಕ್ರಿಯೆ ನಡೆಸಿರುವುದನ್ನು ಶ್ಲಾಘಿಸಿ, ಕೆಇಎ ಮತ್ತು ಉನ್ನತ ಶಿಕ್ಷಣ ಸಚಿವಾಲಯದ ಕಾರ್ಯವನ್ನು ಅಭಿನಂದಿಸಿದರು.
ಉನ್ನತ ಶಿಕ್ಷಣ ಸಚಿವಾಲಯದ ಉಸ್ತುವಾರಿಯಲ್ಲಿ ಕೆಇಎ ಅತ್ಯಂತ ಅಚ್ಚುಕಟ್ಟಾಗಿ ಪರೀಕ್ಷಾ ಪ್ರಕ್ರಿಯೆಯನ್ನು ನಡೆಸಿದ್ದರೂ ಕೆಲವು ದುಷ್ಟ ಶಕ್ತಿಗಳು ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಯಾವುದೇ ಸಾಕ್ಷ್ಯಾಧಾರಾಗಳು ಇಲ್ಲದಿದ್ದರೂ ಆರೋಪಿಸಿ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳನ್ನು ಉನ್ನತ ಶಿಕ್ಷಣ ಸಚಿವಾಲಯ ಮತ್ತು ಕೆಇಎ ಯ ವಿರುದ್ಧವಾಗಿ ದುರುಪಯೋಗಿಸಿಕೊಳ್ಳುತ್ತಿರುವುದರ ಬಗ್ಗೆ ಅಭ್ಯರ್ಥಿಗಳು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಪರೀಕ್ಷಾ ಕ್ರಮದ ಬಗ್ಗೆ ತನಿಖೆ ನಡೆಸಿರುವ ಸಿಸಿಬಿ ಸಂಸ್ಥೆಯು ಭೂಗೋಳಶಾಸ್ತ್ರದ 4 ಅಭ್ಯರ್ಥಿಗಳ ಹೊರತಾಗಿ ಬೇರೆ ಯಾವುದೇ ಅಭ್ಯರ್ಥಿಗಳು ಅಕ್ರಮದಲ್ಲಿ ಭಾಗಿಯಾಗಿರುವ ಸಾಕ್ಷ್ಯ ಇಲ್ಲ ಎಂದು ಚಾರ್ಜ್ ಶೀಟ್ ಸಲ್ಲಿಸಿರುವುದು ಕೆಇಎಯ ದಕ್ಷತೆ ಮತ್ತು ಪಾರದರ್ಶಕತೆಗೆ ಸಾಕ್ಷಿಯಾಗಿದೆ ಎಂದು ಅಭ್ಯರ್ಥಿಗಳು ಅಭಿಪ್ರಾಯಪಟ್ಟರು.
ಜೊತೆಗೆ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವ ವರ್ಷಾಚರಣೆಯ ಸುಸಂದರ್ಭದಲ್ಲೇ ನೇಮಕಾತಿ ಪ್ರಕ್ರಿಯೆಯನ್ನು ಪೂರೈಸಿ ನೂತನ ಶಿಕ್ಷಣ ನೀತಿಯ ಯಶಸ್ಸಿಗೆ ಶಕ್ತಿ ತುಂಬಬೇಕು ಎಂದು ವಿನಂತಿಸಿಕೊಂಡರು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಉನ್ನತ ಶಿಕ್ಷಣ ಸಚಿವರು, ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶೀಘ್ರವೇ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂಬುದಾಗಿ ಭರವಸೆ ನೀಡಿದ್ದಾರೆ. ಈ ಮೂಲಕ ಸಹಾಯಕ ಪ್ರಾಧ್ಯಾಪಕ ಹುದ್ದೆಯ ನಿರೀಕ್ಷೆಯಲ್ಲಿದ್ದಂತ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ.