ಮಡಿಕೇರಿ : ಪ್ರಸಕ್ತ(2022-23) ಸಾಲಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಅಭಿವೃದ್ಧಿ ಕೋಶಗಳಿಂದ ಪರಿಶಿಷ್ಟ ಜಾತಿಯ ಅರ್ಹರಿಗೆ ಇ.ವಿ ಮತ್ತು ಇತರೆ ದ್ವಿಚಕ್ರ ವಾಹನವನ್ನು ಗರಿಷ್ಠ ರೂ.50 ಸಾವಿರ ಸಹಾಯಧನ, ಉಳಿದ ಮೊತ್ತವನ್ನು ಸಾಲದೊಂದಿಗೆ ಖರೀದಿಸಿ ವಿತರಿಸುವ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯಡಿ ಸಾಲ ಸೌಲಭ್ಯ ಪಡೆಯಲು ಇಚ್ಚಿಸುವ ಪರಿಶಿಷ್ಟ ಜಾತಿಯ ಅಭ್ಯರ್ಥಿ ಕಚೇರಿಯಿಂದ ಅರ್ಜಿ ಪಡೆದು ಡಿಸೆಂಬರ್, 23 ರೊಳಗೆ ಅರ್ಜಿಯೊಂದಿಗೆ ಪೋಟೋ, ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಪಡಿತರ ಚೀಟಿ, ಗುರುತಿನ ಚೀಟಿ, ಆಧಾರ್ ಕಾರ್ಡ್(ದೂರವಾಣಿ ಸಂಖ್ಯೆ ಜೋಡಣೆಯಾಗಿರಬೇಕು), ಬ್ಯಾಂಕ್ ಪಾಸ್ ಪುಸ್ತಕ, ಡಿಎಲ್(2 ವೀಲರ್) ದಾಖಲಾತಿಗಳನ್ನು ಲಗತ್ತಿಸಿ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ನಿಯಮಿತ, ಕೊಡಗು ಜಿಲ್ಲೆ-571201 ದೂ.ಸಂ.08272-228857 ನ್ನು ಸಂಪರ್ಕಿಸಬಹುದು ಎಂದು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
BIGG NEWS : “ಭಾರತ ನೋಡಿ ಜಗತ್ತು ಕಲಿಯಬೇಕಿದೆ” ; ‘UPI’ ಮತ್ತು ‘ಆಧಾರ್’ ಯಶಸ್ಸಿಗೆ ‘ಗೂಗಲ್ ಸಿಇಒ’ ಪ್ರಶಂಸೆ