ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳಲ್ಲಿ ಉದ್ಯೋಗದಲ್ಲಿರುವ ಮತ್ತು ಆ ವ್ಯಾಪ್ತಿಯ ಉದ್ದಿಮೆಗಳಲ್ಲಿ ದುಡಿಯುವ ಕಾರ್ಮಿಕರಿಗೆ ಕನಿಷ್ಠ ವೇತನವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿ, ಆದೇಶಿಸಿದೆ.
ಸಾಮಾನ್ಯವಾಗಿ ಐದು ವರ್ಷಕ್ಕೊಮ್ಮೆ ಕನಿಷ್ಠ ವೇತನ ಪರಿಷ್ಕರಿಸಲಾಗುತ್ತದೆ. 2016ರಲ್ಲಿ ಕೊನೆಯದಾಗಿ ವೇತನ ಪರಿಷ್ಕರಿಸಲಾಗಿತ್ತು. ಇದೀಗ ಕನಿಷ್ಠ ವೇತನವನ್ನು ಪರಿಷ್ಕರಿಸಿ, ರಾಜ್ಯಪತ್ರದಲ್ಲಿ ಪ್ರಕಟಿಸಿದೆ.
ಪರಿಷ್ಕೃತ ವೇತನದಂತೆ ಕನಿಷ್ಠ ವೇತನವನ್ನು ಸರಾಸರಿ ಶೇ.10ರಷ್ಟು ಹೆಚ್ಚಳ ಮಾಡಲಾಗಿದೆ. ಬಿಬಿಎಂಪಿ ಮತ್ತು ಇತರ ಮಹಾನಗರ ಪಾಲಿಕೆಗಳ ವ್ಯಾಪ್ತಿಯ ನೌಕರರಿಗೆ ಈ ವೇತನ ಪರಿಷ್ಕರಣೆ ಅನ್ವಯವಾಗಲಿದೆ.
BIGG NEWS : ರಾಜ್ಯದ ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ : ಶೀಘ್ರವೇ ಮಹಿಳೆಯರಿಗಾಗಿ ವಿಶೇಷ ಕ್ಲಿನಿಕ್ ಆರಂಭ