ಶಿವಮೊಗ್ಗ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2022-23ನೇ ಸಾಲಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆಯ ಉದ್ಯೋಗಿನ ಯೋಜನೆಯಡಿ ಪ.ಪಂ.ಕ್ಕೆ 3 ಗುರಿಗಳನ್ನು ನಿಗದಿಪಡಿಸಿದ್ದು, ವ್ಯಾಪಾರ, ಹೈನುಗಾರಿಕೆ ಹಾಗೂ ಗುಡಿಕೈಗಾರಿಕೆ ಇತ್ಯಾದಿ ಚಟುವಟಿಕೆಗಳಿಗೆ ಆರ್ಥಿಕ ಸಹಾಯ ಪಡೆಯಲು ಆರ್ಥಿಕವಾಗಿ ಹಿಂದುಳಿದ ಅರ್ಹ ಪರಿಶಿಷ್ಟ ಪಂಗಡ 18-55 ವರ್ಷದೊಳಗಿನ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

BIGG NEWS: ಸಿದ್ದೇಶ್ವರ ಶ್ರೀಗಳು ಅಸ್ತಂಗತ:ನಿಡಗುಂದಿ ಪಟ್ಟಣ ಬಂದ್;‌ ಸ್ವಾಮೀಜಿ ಭಾವಪೂರ್ಣ ಶ್ರದ್ಧಾಂಜಲಿ

ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, ಕುಟುಂಬದ ವಾರ್ಷಿಕ ಆದಾಯ ರೂ. 2.00 ಲಕ್ಷ ಮೀರಿರಬಾರದು.  ಸಾಲ ಮಂಜೂರಾದ ನಂತರ ಬಿಡುಗಡೆಯ ಮುನ್ನ ಫಲಾನುಭವಿಗಳಿಗೆ ಉದ್ಯಮಶೀಲತಾ ತರಬೇತಿ ಕಡ್ಡಾಯವಾಗಿ ನೀಡಲಾಗುವುದು.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, 100 ಅಡಿರಸ್ತೆ, ಆಲ್ಕೊಳ, ಶಿವಮೊಗ್ಗ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಆದಾಯ ಪ್ರಮಾಣ ಪತ್ರ, ಮತದಾರರ ಗುರುತಿನ ಚೀಟಿ/ಆಧಾರ್ ಕಾರ್ಡ್, ಯೋಜನಾ ವರದಿ, ತರಬೇತಿ ಅಥವಾ ಅನುಭವ ಪತ್ರ, ವಯಸ್ಸಿನ ದೃಢೀಕರಣ ಪತ್ರ ಹಾಗೂ 3 ಇತ್ತೀಚಿನ ಭಾವಚಿತ್ರಗಳನ್ನು ಲಗತ್ತಿಸಿ ಜ.17ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಕಚೇರಿಯನ್ನು ಖುದ್ದಾಗಿ ಅಥವಾ ದೂ.ಸಂ.: 9482031284 / 9901755700 ಗಳನ್ನು ಸಂಪರ್ಕಿಸುವುದು.

Share.
Exit mobile version