ಬೆಂಗಳೂರು: ರಾಜ್ಯ ಸರ್ಕಾರವು ಮಹಿಳೆಯರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಮಹಿಳೆಯರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ನಗರ ಆರೋಗ್ಯ ಕೇಂದ್ರಗಳಲ್ಲಿ 128 ಮಹಿಳಾ ಸ್ವಾಸ್ಥ್ಯ ಕೇಂದ್ರವನ್ನು ತೆರೆಯಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಕುರಿತಂತೆ ಮಾಹಿತಿ ನೀಡಿರುವಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ( Minister Dr K Sudhakar ), ಮಹಿಳೆಯರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ನಗರ ಆರೋಗ್ಯ ಕೇಂದ್ರಗಳಲ್ಲಿ 128 ಮಹಿಳಾ ಸ್ವಾಸ್ತ್ಯ ಕೇಂದ್ರವನ್ನು ತೆರೆಯಲಾಗುವುದು. ವಾರದಲ್ಲಿ ಒಒಂದೊಂದು ದಿನ ನಾನಾ ಕಾಯಿಲೆಗಳಿಗೆ ಸಂಬಂಧಿಸಿದ ತಜ್ಞ ವೈದ್ಯರು ಮಹಿಳೆಯರನ್ನು ತಪಾಸಣೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
438 ನನ್ನೂರ ನಮ್ಮ ಕ್ಲಿನಿಕ್ ಯೋಜನೆಗೆ ಮುಂದಿನ ತಿಂಗಳು ಚಾಲನೆ ನೀಡಲಾಗುವುದು. ನಗರಸಭೆ ಹಾಗೂ ನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆರ್ಥಿಕವಾಗಿ ಹಿಂದುಳಿದ, ಬಡತನ ರೇಖೆಗಿಂತ ಕೆಳಗಿರುವ ಹಾಗೂ ಕೊಳಚೆ ಪ್ರದೇಶದಲ್ಲಿ ವಾಸಿಸುವ ಜನರ ಆರೋಗ್ಯದ ಹಿತರಕ್ಷಣೆ ದೃಷ್ಟಿಯಿಂದ ಈ ಯೋಜನೆ ಜಾರಿಗೆ ತರಲಾಗುತ್ತದೆ ಎಂದು ಹೇಳಿದ್ದಾರೆ.