ಚಿತ್ರದುರ್ಗ : ರಾಜ್ಯ ಸರ್ಕಾರವು ಸ್ತ್ರೀಶಕ್ತಿ ಸಾಮರ್ಥ್ಯ, ವಿವೇಕಾನಂದ ಯುವಶಕ್ತಿ ಯೋಜನೆಗೆ ನವೆಂಬರ್ ನಿಂದ ಜಾರಿಗೊಳಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಯಂ ಉದ್ಯೋಗ ಕೈಗೊಂಡು, ಸ್ವಾವಲಂಬಿ ಬದುಕನ್ನು ಸಾಗಿಸಲು ಅನುಕೂಲ ಕಲ್ಪಿಸಿಕೊಒಡುವ ನಿಟ್ಟಿನಲ್ಲಿ ಮಹಿಳೆಯರಿಗಾಗಿ ಸ್ತ್ರೀ ಸಾಮರ್ಥ್ಯ ಹಾಗೂ ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆಯನ್ನು ಬರುವ ನವೆಂಬರ್ ತಿಂಗಳಲ್ಲಿ ಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಗ್ರಾಮದ ಎರಡು ಸ್ತ್ರೀ ಶಕ್ತಿ ಸಂಘಗಳಿಗೆ ತಲಾ 5 ಲಕ್ಷ ರೂ. ನೆರವು ನೀಡುವ ಯೋಜನೆ ರೂಪಿಸಿ ಅದರಿಂದ ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯಡಿ ರಾಜ್ಯದ ಪ್ರತಿ ಗ್ರಾಮದ ಎರಡು ಯುವಕ ಸಂಘಗಳಿಗೆ ತಲಾ 5 ಲಕ್ಷ ರೂ.ಗಳ ನೆರವು ನೀಡಲಾಗುವುದು ಎಂದು ಹೇಳಿದ್ದಾರೆ.