ಬೆಂಗಳೂರು : ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಿಹಿಸುದ್ದಿ ನೀಡಿದ್ದು, ಶೀಘ್ರದಲ್ಲೇ ಶಿಕ್ಷಣ ಇಲಾಖೆಯು 2,500 ಪ್ರೌಢಶಾಲೆ ಶಿಕ್ಷಕರು ಹಾಗೂ 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಇಲಾಖೆಯು ಶೀಘ್ರವೇ 2,500 ಪ್ರೌಢಶಾಲೆ ಶಿಕ್ಷಕರು ಹಾಗೂ 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ಮುಂದಾಗಿದ್ದು, ಶೀಘ್ರವೇ ಅಧಿಸೂಚನೆ ಪ್ರಕಟಗೊಳ್ಳಲಿದೆ ಎಂದು ಹೇಳಿದ್ದಾರೆ.
15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ. ಬಳಿಕ 2,500 ಪ್ರೌಢಶಾಲೆ ಶಿಕ್ಷಕರು ಹಾಗೂ 778 ಪಿಯು ಕಾಲೇಜು ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
BIGG NEWS: ಮುರುಘಾಶ್ರೀಗಳ ಅಕ್ಷಮ್ಯ ಅಪರಾಧ: ತಕ್ಕ ಶಿಕ್ಷೆಯಾಗಬೇಕು; ಬಿ.ಎಸ್.ಯಡಿಯೂರಪ್ಪ