ಬೆಂಗಳೂರು : ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರು ದಸರಾ ವೀಕ್ಷಣೆಗೆ ಹೋಗುವ ಪ್ರವಾಸಿಗರಿಗೆ ಹಾಗೂ ಬೆಂಗಳೂರಿನಿಂದ ತಮ್ಮ ಊರಿಗೆ ಹೋಗುವ ಪ್ರಯಾಣಿಕರಿಗೆ ಕೆಎಸ್ ಆರ್ ಸಿಸಿ ಸಿಹಿಸುದ್ದಿ ನೀಡಿದ್ದು, ದಸರಾ ರಜೆಗಳ ಪ್ರಯುಕ್ತ 2000 ಸಾವಿರಕ್ಕೂ ಹೆಚ್ಚು ವಿಶೇಷ ಬಸ್ ಗಳ ವ್ಯವಸ್ಥೆ ಮಾಡಿದೆ.
BREAKING NEWS : ಇಂದು ಜಪಾನ್ ಮಾಜಿ ಪಿಎಂ ʻಶಿಂಜೋ ಅಬೆʼ ಅಂತಿಮ ಸಂಸ್ಕಾರ: ಟೋಕಿಯೊ ತಲುಪಿದ ಪ್ರಧಾನಿ ಮೋದಿ
ಮೈಸೂರು ದಸರಾ ವೀಕ್ಷಣೆಗೆ ಆಗಮಿಸುವ ರಾಜ್ಯದ ವಿವಿಧ ಜಿಲ್ಲೆಗಳಿಂದ ರಾಜಹಂಸ, ಸ್ಲೀಪರ್, ಐರಾವತ, ಐರಾವತ್ ಕ್ಲಬ್, ಕ್ಲಾಸ್ ಹಾಗೂ ಅಂಬಾರಿ ಕ್ಲಬ್ ಕ್ಲಾಸ್ ಸಾರಿಗೆ ಸೇವೆಗಳ ಜೊತೆಗೆ 2000 ಸಾವಿರಕ್ಕೂ ಹೆಚ್ಚು ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.
“ಆನ್ಲೈನ್ನಲ್ಲಿ PF ಖಾತೆಗೆ ನಾಮಿನಿ” ಮಾಡುವುದು, ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ | EPF e-Nomination
ದಸರಾ ಹಬ್ಬದ ರಜೆಗಳ ಪ್ರಯುಕ್ತ ಕೆಎಸ್ ಆರ್ ಟಿಸಿ ನಿಗಮವು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 30-09-2022 ರಿಂದ 03-10-2022 ರವರೆಗೆ ಬೆಂಗಳೂರಿನಿಂದ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಗೆ 2000 ಕ್ಕೂ ಹೆಚ್ಚು ಬಸ್ ಗಳ ವ್ಯವಸ್ಥೆ ಮಾಡಲಾಗಿದೆ. ಸದರಿ ವಾಹನಗಳನ್ನು ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಹಾಗೂ ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಆಚರಣೆ ಮಾಡಲಾಗುವುದು ಎಂದು ಕೆಎಸ್ ಆರ್ ಟಿಸಿ ತಿಳಿಸಿದೆ.
ಮೈಸೂರು ದಸರಾ ಪ್ರಯುಕ್ತ ಕೆಎಸ್ ಆರ್ ಟಿಸಿಯಿಂದ 450 ವಿಶೇಷ ಸಾರಿಗೆ ವ್ಯವಸ್ಥೆ
ಬೆಂಗಳೂರು ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 200 ಹೆಚ್ಚುವರಿ ವಾಹನಗಳ ಕಾರ್ಯಚರಣೆ ಹಾಗೂ ಮೈಸೂರಿನ ಸುತ್ತಮುತ್ತಲಿನ ಪ್ರೇಕ್ಷಣಿಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್ ಆಣೆಕಟ್ಟು, ಬೃಂದಾವನ, ಶ್ರೀರಂಗಪಟ್ಟ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಹೆಚ್.ಡಿ.ಕೋಟೆ, ಚಾಮರಾನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 250 ಹೆಚ್ಚುವರಿ ವಾಹನಗಳು ಸೇರಿ 450 ದಸರಾ ವಿಶೇಷ ವಾಹನಗಳನ್ನು ಕಾರ್ಯಾಚರಿಸಲು ಯೋಜಿಸಲಾಗಿದೆ.