ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ( Belagavi Suvarna Soudha ) ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ( Winter Session ) ಭಾಗಿಯಾಗುವ ವಿವಿಧ ಇಲಾಖೆಯ ಸರ್ಕಾರಿ ನೌಕರರು ( Karnataka Government Employees ), ಕಡ್ಡಾಯವಾಗಿ ಇಲಾಖಾ ಗುರುತಿನ ಚೀಟಿ ( Identity Card ) ಧರಿಸಿ, ಕಾರ್ಯಕಲಾಪಗಳಲ್ಲಿ ಭಾಗಿಯಾಗುವಂತೆ ಸರ್ಕಾರ ಸೂಚಿಸಿದೆ.
ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ದಿನಾಂಕ 19-12-2022 ರಿಂದ 30-12-2022ರವರೆಗೆ ಬೆಳಗಾವಿ ಜಿಲ್ಲೆಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಕಾರ್ಯಕಲಾಪದಲ್ಲಿ ಭಾಗವಹಿಸುವಂತ ಎಲ್ಲಾ ಅಧಿಕಾರಿ, ಸಿಬ್ಬಂದಿಗಳು ಕರ್ನಾಟಕ ಸರ್ಕಾರ ಸಚಿವಾಲಯದಿಂದ ನೀಡಲಾಗುವ ಅಧಿಕೃತ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಿ ಹಾಜರಾಗುವಂತೆ ತಿಳಿಸಿದೆ.
ಇನ್ನೂ ಭದ್ರತೆಯ ಹಿನ್ನಲೆಯಲ್ಲಿ ಪ್ರವೇಶಕ್ಕೆ ಸರ್ಕಾರಿ ನೌಕರರು ಗುರುತಿನ ಚೀಟಿಯನ್ನು ಧರಿಸಿದ್ದರೇ ಮಾತ್ರವೇ ಪ್ರವೇಶಕ್ಕೆ ಅನುಮತಿಸಲಾಗುವುದು ಎಂದು ಬೆಳಗಾವಿ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ. ಹೀಗಾಗಿ ಎಲ್ಲಾ ಅಧಿಕಾರಿ, ನೌಕರರುಗಳು ತಪ್ಪದೇ ತಮ್ಮ ಗುರುತಿನ ಚೀತಿಯನ್ನು ತೆಗೆದುಕೊಂಡು ಹೋಗುವಂತೆ ಸೂಚಿಸಿದ್ದಾರೆ.