ಶಿವಮೊಗ್ಗ : ಪ್ರವೀಣ್ ನೆಟ್ಟಾರು ಹಾಗೂ ಸುರತ್ಕಲ್‌ನ ಮಹಮ್ಮದ್‌ ಫಾಝಿಲ್ ಕೊಲೆ ತನಿಖೆಯಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ.

BIGG NEWS: ಬ್ಯಾಡರಹಳ್ಳಿ ಪೊಲೀಸರಿಂದ ಗಾಂಜಾ ಪೆಡ್ಲರ್ ಬಂಧನ

ಪ್ರವೀಣ್ ಹಾಗೂ ಫಾಜಿಲ್ ಹತ್ಯೆ ತನಿಖೆ ವಿಚಾರದಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂಬ ವಿರೋಧ ಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಅರಗಜ್ಞಾನೇಂದ್ರ, ವಿರೋಧ ಪಕ್ಷಗಳು ಆರೋಪಿಸುವಂತೆ ಸರ್ಕಾರ ಯಾವುದೇ ತಾರತಮ್ಯ ಮಾಡುತ್ತಿಲ್ಲ, ಪ್ರವೀಣ್ ಕೊಲೆ ಪ್ರಕರಣದಲ್ಲಿ ಆರೋಪಿಗಳಿಗೆ ಎರಡು ರಾಜ್ಯಗಳ ನಂಟು ಇದೆ. ಹೀಗಾಗಿ ತನಿಖೆಯ ಹೊಣೆ ಎನ್‌ಐಎಗೆ ಒಪ್ಪಿಸಿದ್ದೇವೆ. ಫಾಝಿಲ್ ಕೊಲೆ ಪ್ರಕರಣದ ತನಿಖೆ ಪ್ರಾಥಮಿಕ ಹಂತದಲ್ಲಿದೆ ಎಂದು ತಿಳಿಸಿದ್ದಾರೆ.

Breaking news:‌ ಜಾರ್ಖಂಡ್‌ನ ಮೂವರು ಕಾಂಗ್ರೆಸ್ ಶಾಸಕರಿದ್ದ ಕಾರಿನಲ್ಲಿ ಹಣದ ರಾಶಿ ಪತ್ತೆ, ಬಂಗಾಳ ಪೊಲೀಸರ ವಶಕ್ಕೆ

ಇನ್ನು ಕೊಲೆ ಪ್ರಕರಣಗಳ ತ್ವರಿತ ವಿಚಾರಣೆಗೆ ನೆರವಾಗಲು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ಮಾಡುತ್ತಿದ್ದೇವೆ. ಆದ್ಯತೆಯ ಮೇರೆಗೆ ಪ್ರಕರಣಗಳನ್ನು ತೆಗೆದುಕೊಳ್ಳಲು ನ್ಯಾಯಾಲಯಕ್ಕೆ ಮನವಿ ಮಾಡಲಾಗುವುದು. ಮೇಲ್ವಿಚಾರಣೆಗೆ ಅಧಿಕಾರಿಗಳನ್ನು ನೇಮಿಸಲಾಗುತ್ತಿದೆ ಎಂದು ಹೇಳಿದ್ದಾರೆ.

Share.
Exit mobile version