ಬೆಂಗಳೂರು : ಕಾಂಗ್ರೆಸ್ ಪಕ್ಷದ ಒಳ್ಳೆಯ ದಿನಗಳಲ್ಲಿ ಅಧಿಕಾರ-ಅವಕಾಶಗಳನ್ನು ಅನುಭವಿಸಿರುವ ಗುಲಾಂ ನಬೀ ಆಜಾದ್, ಕಷ್ಟದ ಕಾಲದಲ್ಲಿ ಪಕ್ಷದ ಜೊತೆಗೆ ನಿಲ್ಲಬೇಕಾಗಿರುವುದು ಕರ್ತವ್ಯವಾಗಿತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಗುಲಾಮ್ ನಬೀ ಅಜಾದ್ ರಾಜೀನಾಮೆ ಕುರಿತಂತೆ ಸರಣಿ ಟ್ವೀಟ್ ಮಾಡಿರುವ ಅವರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಗುಲಾಂ ನಬೀ ಆಜಾದ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿರುವುದು ವಿಷಾದನೀಯ ಬೆಳವಣಿಗೆ. 50 ವರ್ಷಗಳ ಕಾಲ ಪಕ್ಷದಿಂದಲೇ ಅಧಿಕಾರ-ಅವಕಾಶಗಳನ್ನು ಪಡೆದ ಆಜಾದ್ ಉಂಡ ಮನೆಗೆ ಎರಡು ಬಗೆಯಬಾರದಿತ್ತು ಎಂದಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಗುಲಾಂ ನಬೀ ಆಜಾದ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿರುವುದು ವಿಷಾದನೀಯ ಬೆಳವಣಿಗೆ. 50 ವರ್ಷಗಳ ಕಾಲ ಪಕ್ಷದಿಂದಲೇ ಅಧಿಕಾರ-ಅವಕಾಶಗಳನ್ನು ಪಡೆದ ಆಜಾದ್ ಉಂಡ ಮನೆಗೆ ಎರಡು ಬಗೆಯಬಾರದಿತ್ತು. 1/14#GulamNabiAzad
— Siddaramaiah (@siddaramaiah) August 27, 2022
ಕಾಂಗ್ರೆಸ್ ಪಕ್ಷದ ಒಳ್ಳೆಯ ದಿನಗಳಲ್ಲಿ ಅಧಿಕಾರ-ಅವಕಾಶಗಳನ್ನು ಅನುಭವಿಸಿರುವ ಗುಲಾಂ ನಬೀ ಆಜಾದ್, ಕಷ್ಟದ ಕಾಲದಲ್ಲಿ ಪಕ್ಷದ ಜೊತೆಗೆ ನಿಲ್ಲಬೇಕಾಗಿರುವುದು ಕರ್ತವ್ಯವಾಗಿತ್ತು. ಆದರೆ ಆಜಾದ್ ಅವರು ಪಕ್ಷದ ಕಷ್ಟದ ಕಾಲದಲ್ಲಿಯೇ ಕುಂಟುನೆಪಗಳನ್ನು ಮುಂದಿಟ್ಟು ವಿದಾಯ ಹೇಳಿರುವುದು ದ್ರೋಹ ಚಿಂತನೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಒಳ್ಳೆಯ ದಿನಗಳಲ್ಲಿ ಅಧಿಕಾರ-ಅವಕಾಶಗಳನ್ನು ಅನುಭವಿಸಿರುವ ಗುಲಾಂ ನಬೀ ಆಜಾದ್, ಕಷ್ಟದ ಕಾಲದಲ್ಲಿ ಪಕ್ಷದ ಜೊತೆಗೆ ನಿಲ್ಲಬೇಕಾಗಿರುವುದು ಕರ್ತವ್ಯವಾಗಿತ್ತು. ಆದರೆ ಆಜಾದ್ ಅವರು ಪಕ್ಷದ ಕಷ್ಟದ ಕಾಲದಲ್ಲಿಯೇ ಕುಂಟುನೆಪಗಳನ್ನು ಮುಂದಿಟ್ಟು ವಿದಾಯ ಹೇಳಿರುವುದು ದ್ರೋಹ ಚಿಂತನೆಯಾಗಿದೆ. 2/14#GulamNabiAzad
— Siddaramaiah (@siddaramaiah) August 27, 2022
ಇತ್ತೀಚಿನ ಚುನಾವಣೆಗಳಲ್ಲಿನ ಹಿನ್ನಡೆಯಿಂದಾಗಿ ಕಾಂಗ್ರೆಸ್ ಕಷ್ಟದ ದಿನಗಳಲ್ಲಿದೆ. ಕೇಂದ್ರದ ಸರ್ವಾಧಿಕಾರಿ ಪ್ರಭುತ್ವದಿಂದಾಗಿ ದೇಶ ಕಷ್ಟದಲ್ಲಿದೆ. ದೇಶಾದ್ಯಂತ ದಲಿತರು, ಹಿಂದುಳಿದ ಜಾತಿಗಳು ಮತ್ತು ಅಲ್ಪಸಂಖ್ಯಾತ ಸಮುದಾಯಗಳು ಪ್ರಭುತ್ವದ ಕೆಂಗಣ್ಣಿಗೆ ಗುರಿಯಾಗಿವೆ. ಈ ಸ್ಥಿತಿಯಲ್ಲಿ ಆಜಾದ್ ಯಾರ ಪರ ಇರಬೇಕಾಗಿತ್ತು? ಎಂದು ಪ್ರಶ್ನಿಸಿದ್ದಾರೆ.
ಇತ್ತೀಚಿನ ಚುನಾವಣೆಗಳಲ್ಲಿನ ಹಿನ್ನಡೆಯಿಂದಾಗಿ ಕಾಂಗ್ರೆಸ್ ಕಷ್ಟದ ದಿನಗಳಲ್ಲಿದೆ. ಕೇಂದ್ರದ ಸರ್ವಾಧಿಕಾರಿ ಪ್ರಭುತ್ವದಿಂದಾಗಿ ದೇಶ ಕಷ್ಟದಲ್ಲಿದೆ. ದೇಶಾದ್ಯಂತ ದಲಿತರು, ಹಿಂದುಳಿದ ಜಾತಿಗಳು ಮತ್ತು ಅಲ್ಪಸಂಖ್ಯಾತ ಸಮುದಾಯಗಳು ಪ್ರಭುತ್ವದ ಕೆಂಗಣ್ಣಿಗೆ ಗುರಿಯಾಗಿವೆ. ಈ ಸ್ಥಿತಿಯಲ್ಲಿ ಆಜಾದ್ ಯಾರ ಪರ ಇರಬೇಕಾಗಿತ್ತು? 3/14#GulamNabiAzad
— Siddaramaiah (@siddaramaiah) August 27, 2022
ಒಬ್ಬ ಸಾಮಾನ್ಯ ಕಾರ್ಯಕರ್ತ ಪಕ್ಷದಿಂದ ಬಯಸುವ ಎಲ್ಲ ಹುದ್ದೆ ಮತ್ತು ಅವಕಾಶಗಳನ್ನು ಆಜಾದ್ ಅವರು ಪಡೆದಿದ್ದಾರೆ. ಅವರಷ್ಟೇ ದೀರ್ಘಕಾಲ ಕಾಂಗ್ರೆಸ್ ಪಕ್ಷದಲ್ಲಿದ್ದರೂ ಕೂಡಾ ಇಷ್ಟೊಂದು ಅವಕಾಶಗಳನ್ನು ಪಡೆದಿರುವುದು ಅಪರೂಪ. ಇದನ್ನು ಅವರು ಯೋಚಿಸಬೇಕಾಗಿತ್ತು ಎಂದು ಹೇಳಿದ್ದಾರೆ.
ಇಂದಿರಾಗಾಂಧಿ, ರಾಜೀವ್ ಗಾಂಧಿ, ನರಸಿಂಹರಾವ್ ಮತ್ತು ಮನಮೋಹನ್ ಸಿಂಗ್ ಸೇರಿದಂತೆ ನಾಲ್ವರು ಪ್ರಧಾನಿಗಳ ಸಂಪುಟದಲ್ಲಿ ದೀರ್ಘಕಾಲ ಸಚಿವರಾಗಿದ್ದ ಆಜಾದ್ ಅವರು ನೀತಿ-ನಿರ್ಧಾರಗಳನ್ನು ಕೈಗೊಳ್ಳುವ ಪಕ್ಷದ ವಿವಿಧ ಘಟಕಗಳಲ್ಲಿ ಪ್ರಮುಖ ಪದಾಧಿಕಾರಿಯಾಗಿದ್ದವರು. ಇನ್ನೇನು ಬೇಕಿತ್ತು ಅವರಿಗೆ? 4/14#GulamNabiAzad
— Siddaramaiah (@siddaramaiah) August 27, 2022
ಕಾಂಗ್ರೆಸ್ ಪಕ್ಷವನ್ನು ತೊರೆದು ಅವರ ಪಾಡಿಗೆ ಹೋಗಿದ್ದರೆ ಶುಭಕೋರಿ ಬೀಳ್ಕೊಡಬಹುದಿತ್ತೇನೋ? ಆದರೆ ಅವರು ನಿರ್ಗಮಿಸುವಾಗ ಪಕ್ಷದ ಪ್ರಮುಖ ನಾಯಕರಾದ ರಾಹುಲ್ ಗಾಂಧಿ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ. ಇದು ಅತ್ಯಂತ ಖಂಡನೀಯ ಎಂದು ಕಿಡಿಕಾರಿದ್ದಾರೆ.
2004ರಲ್ಲಿ ಮೊದಲ ಬಾರಿ ಲೋಕಸಭಾ ಸದಸ್ಯರಾದ ರಾಹುಲ್ ಗಾಂಧಿ ಅವರು ಇಚ್ಚಿಸಿದ್ದರೆ ಕೇಂದ್ರ ಸಚಿವರಾಗಬಹುದಿತ್ತು. ಅವರು ಅಧಿಕಾರಕ್ಕಾಗಿ ಆಸೆ ಪಡದೆ ಪಕ್ಷಕ್ಕಾಗಿ ದುಡಿಯುವ ನಿರ್ಧಾರ ಕೈಗೊಂಡರು. ಇಂತಹವರನ್ನು ಸದಾ ಅಧಿಕಾರಕ್ಕೆ ಅಂಟಿಕೊಂಡೇ ಇದ್ದ ಆಜಾದ್ ಅವರಿಗೆ ಟೀಕಿಸುವ ಯಾವ ನೈತಿಕತೆಯೂ ಇಲ್ಲ ಎಂದರು.
ಕಾಂಗ್ರೆಸ್ ಪಕ್ಷ ಗೆಲುವಿನ ಹಾದಿಯಲ್ಲಿರುವಾಗ ಸರ್ಕಾರ ಮತ್ತು ಪಕ್ಷದಲ್ಲಿ ಅಧಿಕಾರವನ್ನು ಅನುಭವಿಸಿದ್ದ ಗುಲಾಂ ನಬೀ ಆಜಾದ್ ಅವರು ಈಗ ಪಕ್ಷ ಕಷ್ಟದಲ್ಲಿರುವಾಗ ಅದರ ದೂಷಣೆಗೆ ಇಳಿದಿರುವುದು ಅವರ ವಯಸ್ಸು ಮತ್ತು ಅನುಭವಕ್ಕೆ ತಕ್ಕುದಾದ ನಡೆ ಅಲ್ಲ. ಅಜ್ಜ ಪಂಡಿತ ಜವಾಹರಲಾಲ್ ನೆಹರೂ ಅವರಂತೆ ಕಟ್ಟಾ ಪ್ರಜಾಪ್ರಭುತ್ವವಾದಿಯಾಗಿರುವ ರಾಹುಲ್ ಗಾಂಧಿ ಯವರು ಪಕ್ಷದೊಳಗೆ ಆಂತರಿಕ ಪ್ರಜಾಪ್ರಭುತ್ವ ಇರಬೇಕೆಂದು ಪ್ರತಿಪಾದಿಸುತ್ತಾ ಬಂದವರು, ಅವರೆಂದೂ ಸರ್ವಾಧಿಕಾರಿಯಂತೆ ವರ್ತಿಸಿಲ್ಲ ಎಂದು ತಿಳಿಸಿದ್ದಾರೆ.
ಪಕ್ಷಕ್ಕೆ ಸಂಬಂಧಿಸಿದ ನಿರ್ಧಾರವನ್ನು ರಾಹುಲ್ ಗಾಂಧಿ ಅವರು ಸದಾ ಚರ್ಚೆ-ಮಾತುಕತೆಯ ಮೂಲಕ ಎಲ್ಲರ ಅಭಿಪ್ರಾಯವನ್ನು ಪಡೆದು ಕೈಗೊಳ್ಳುತ್ತಾ ಬಂದಿದ್ದಾರೆ. ಪಕ್ಷದ ಯುವಕಾಂಗ್ರೆಸ್ ಅಧ್ಯಕ್ಷರನ್ನು ಚುನಾವಣೆ ಮೂಲಕ ಆಯ್ಕೆ ಮಾಡುವ ನಿರ್ಧಾರವೇ ಅವರ ಪ್ರಜಾತಾಂತ್ರಿಕ ನಡವಳಿಕೆಗೆ ಸಾಕ್ಷಿ ಎಂದಿದ್ದಾರೆ.
ಬದಲಾಗಿರುವ ಕಾಲ ಮತ್ತು ತಲೆಮಾರಿಗೆ ಪ್ರಸ್ತುತವಾಗುವ ರೀತಿಯಲ್ಲಿ ಪಕ್ಷವನ್ನು ಕಟ್ಟುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡುತ್ತಾ ಬಂದಿದ್ದಾರೆ. ಪಕ್ಷಕ್ಕೆ ಹೊಸರಕ್ತ ತುಂಬುವ ಪ್ರಯತ್ನದಲ್ಲಿ ಹಳೆಯ ತಲೆಗಳನ್ನು ಬದಲಾವಣೆ ಮಾಡುವುದು ಅನಿವಾರ್ಯವಾಗಿತ್ತು. ಆಜಾದ್ ಅವರಂತಹ ಹಿರಿಯರು ಇದನ್ನು ಅರ್ಥಮಾಡಿಕೊಳ್ಳಬೇಕಿತ್ತು ಎಂದು ಹೇಳಿದ್ದಾರೆ.
ಗುಲಾಂ ನಬೀ ಆಜಾದ್ ಅವರು ರಾಜೀನಾಮೆ ನೀಡಿರುವ ಹೊತ್ತು ಹಾಗೂ ಅವರ ರಾಜೀನಾಮೆ ಪತ್ರದ ಒಕ್ಕಣೆಯನ್ನು ನೋಡಿದರೆ ತಮಗೆ ಆಗಿರುವ ನೋವನ್ನು ವ್ಯಕ್ತಪಡಿಸುವ ಸದುದ್ದೇಶಕ್ಕಿಂತಲೂ, ನಮ್ಮ ಪ್ರಮುಖ ಎದುರಾಳಿ ಪಕ್ಷವನ್ನು ಖುಷಿಪಡಿಸುವ ದುರುದ್ದೇಶ ಇದ್ದಂತೆ ಕಾಣುತ್ತಿದೆ ಎಂದಿದ್ದಾರೆ.
ಕೋಟ್ಯಂತರ ಸಂಖ್ಯೆಯ ಕಾರ್ಯಕರ್ತರ ಬಲವನ್ನು ಹೊಂದಿರುವ ಕಾಂಗ್ರೆಸ್ ಪಕ್ಷದ ಮೇಲೆ ಒಬ್ಬ ನಾಯಕರ ನಿರ್ಗಮನ ಯಾವ ಪರಿಣಾಮವನ್ನು ಬೀರದು. ಈ ದುರಿತದ ಕಾಲದಲ್ಲಿ ದೇಶವನ್ನು ಉಳಿಸುವ ದೊಡ್ಡ ಜವಾಬ್ದಾರಿ ಕಾಂಗ್ರೆಸ್ ಪಕ್ಷದ ಮೇಲಿದೆ. ಒಬ್ಬ ವ್ಯಕ್ತಿಯ ನಿರ್ಗಮನದಿಂದ ವಿಚಲಿತರಾಗದೆ ದೇಶ ಉಳಿಸುವ ಕರ್ತವ್ಯವನ್ನು ಜವಾಬ್ದಾರಿಯಿಂದ, ಸಂಘಟಿತರಾಗಿ ನಿಭಾಯಿಸಲು ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಮತ್ತು ಕಾರ್ಯಕರ್ತರು ಕಟಿಬದ್ಧರಾಗಬೇಕೆಂದು ಎಂದು ಮನವಿ ಮಾಡಿದ್ದಾರೆ.