ಬೆಂಗಳೂರು : ರಸ್ತೆ ಗುಂಡಿಗಳಿಂದ ಅಪಘಾತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡ ಮತ್ತು ಸಾವನ್ನಪ್ಪಿದ ಪ್ರಕರಣಗಳಲ್ಲಿ ಎಫ್ ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಗೃಹ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ.
BIGG NEWS : ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್ : `BBMP’ ಚುನಾವಣೆಗೆ ಇನ್ನೂ 4 ತಿಂಗಳು ಗಡುವು ನೀಡಿದ ಸುಪ್ರೀಂಕೋರ್ಟ್
ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ರಸ್ತೆ ಗುಂಡಿಗಳ ಅವಾಂತರಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ರಸ್ತೆ ಗುಂಡಿಗಳಿಂದ ಅಪಘಾತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದರೆ ಮತ್ತು ಸಾವನ್ನಪ್ಪಿದರೆ ತಾಂತ್ರಿಕ ಕಾರಣಗಳನ್ನು ನೀಡದೇ ಎಫ್ ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಹೈಕೋರ್ಟ್ ಸೂಚನೆ ನೀಡಿದೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ವಿಜಯನ್ ಮೆನನ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಲೆ ಮತ್ತು ನ್ಯಾ. ಅಶೋಕ್ ಎಸ್ ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠ ನಿರ್ದೇಶನ ನೀಡಿದೆ.
BIG NEWS : 2023ರಲ್ಲಿ ಟೆಕ್ ಕಂಪನಿಗಳಲ್ಲಿ ಮತ್ತಷ್ಟು ಹೆಚ್ಚಲಿದೆ ಉದ್ಯೋಗ ಕಡಿತ… ಆರ್ಥಿಕ ತಜ್ಞರು ಹೇಳಿದ್ದೇನು?