ಬೆಂಗಳೂರು: ಮಂಡ್ಯದಿಂದ ಕುಮಾರಸ್ವಾಮಿ ಅವರ ಸ್ಪರ್ಧೆ ಅಂತಿಮವಾಗಿದೆ. ಪಕ್ಷದ ವರಿಷ್ಠರೇ ಅಧಿಕೃತವಾಗಿ ಹೆಸರು ಘೋಷಣೆ ಮಾಡ್ತಾರೆ ಅಂತ ಕುಮಾರಸ್ವಾಮಿ ಪುತ್ರ, ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇನ್ನೂ ಕುಮಾರಸ್ವಾಮಿ ಅವರಿಗೆ ರಾಜ್ಯದ ಪರವಾಗಿ ಬದ್ದತೆ ಇದೆ. ರಾಜ್ಯದ ಪರವಾಗಿ ಕೆಲಸ ಮಾಡ್ತಾರೆ ಅಂತ ಬಿಜೆಪಿ ಹೈಕಮಾಂಡ್ ನಾಯಕರಿಗೂ ಅನ್ನಿಸಿದೆ. ಅಧಿಕೃತವಾಗಿ ಕುಮಾರಸ್ವಾಮಿ ಅವರು ಅಭ್ಯರ್ಥಿ ಆಗೋ ಬಗ್ಗೆ ವರಿಷ್ಠರು ಅಧಿಕೃತ ಘೋಷಣೆ ಮಾಡ್ತಾರೆ ಅಂಥ ಹೇಳಿದ್ದಾರೆ.ಇನ್ನೂ ಏಪ್ರಿಲ್ 4 ರಂದು ನಾಮಪತ್ರ ಸಲ್ಲಿಕೆ ಮಾಡುವ ಸಾಧ್ಯತೆ ಕೂಡ ಇದೇ ಎನ್ನಲಾಗಿದೆ.