ಬೆಳಗಾವಿ : ರಾಜ್ಯಾದ್ಯಂತ ಮಳೆಯ ಆರ್ಭಟ ಮತ್ತೆ ಶುರುವಾಗಿದ್ದು, ಉತ್ತರ ಕರ್ನಾಟಕದಲ್ಲಿ ಭಾರೀ ಮಳೆಯಿಂದಾಗಿ ಹಲವಡೆ ಸೇತುವೆಗಳು ಮುಳುಗಡೆಯಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.
BIG NEWS : ಫ್ಲೋರಿಡಾದಲ್ಲಿ ʻಇಯಾನ್ʼ ಚಂಡಮಾರುತದ ಅಬ್ಬರಕ್ಕೆ 40ಕ್ಕೂ ಹೆಚ್ಚು ಮಂದಿ ಬಲಿ: ವರದಿ
ರಾಯಚೂರಿನಲ್ಲಿ ಮಳೆಗೆ ಹತ್ತಿ, ತೊಗರಿ ಸೇರಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿವೆ. ಇನ್ನೊಂದೆಡೆ ಮಳೆಯಿಂದ ತತ್ತರಿಸಿರುವ ಚಿತ್ರದುರ್ಗದ ಹೆಬ್ಬಾಳ್ ಗ್ರಾಮದ ಹೆಬ್ಬಾಳ್ ಕೆರೆ ಕೋಡಿಯೊಡೆದು ನೀರೆಲ್ಲಾ ಜಮೀನುಗಳಿಗೆ ನುಗ್ಗಿದೆ. ಇದೇ ಸಮಯದಲ್ಲಿ ಮನೆ ಮೇಲ್ಚಾವಣಿ ಕುಸಿಯುವುದನ್ನು ನೋಡಿದ ವೃದ್ಧೆಯೊಬ್ಬರು ಮೊಮ್ಮಕ್ಕಳನ್ನು ಬಚಾವ್ ಮಾಡಿದ ಘಟನೆಯೂ ನಡೆದಿದೆ. ಮಾತ್ರವಲ್ಲದೆ ನೀರಿನಲ್ಲಿ ನಾಲ್ವರು ಕೊಚ್ಚಿಹೋದ ಪ್ರಕರಣ ಸಂಬಂಧ ಸ್ಥಳಕ್ಕೆ ಭೇಟಿ ನೀಡಿದ ಸಚಿವರನ್ನು ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ರಾಯಚೂರಿನ ಲಿಂಗಸುಗೂರು, ಸಿಂಧನೂರು, ಮಸ್ಕಿ, ಮಾನ್ವಿ, ದೇವದುರ್ಗ, ಸಿರವಾರ ತಾಲ್ಲೂಕುಗಳಲ್ಲಿ ಕಳೆದ ಮೂರು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಇದರಿಂದಾಗಿ ಬೆಳೆಗಳು ನಾಶವಾಗಿ ರೈತರು ಪರಿತಪಿಸುವಂತಾಗಿದೆ. ಹಳ್ಳದ ನೀರು ಜಮೀನುಗಳಿಗೆ ನುಗ್ಗಿ ಹತ್ತಿ, ತೊಗರಿ ಸೇರಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ
ದಾವಣಗೆರೆ ಜಿಲ್ಲೆಯಲ್ಲೂ ಮಳೆಗೆ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಮಳೆಗೆ ಶಾಗಲೆ ಹಳ್ಳಕ್ಕೆ ಅಪಾರ ಪ್ರಮಾಣದ ನೀರು ಹರಿದುಬಂದಿದ್ದದು, ಭದ್ರಾ ಮುಖ್ಯ ಕಾಲುವೆಯ ತೂಗು ಸೇತುವೆ ಕುಸಿತಗೊಂಡಿದೆ. ಇದರಿಂದಾಗಿ ನಲ್ಕುಂದ ಗ್ರಾಮದ ಸುತ್ತ ಮುತ್ತಲಿನ ಜಮೀನಿಗೂ ನೀರು ನುಗ್ಗಿದ್ದು ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.
ಉತ್ತರ ಕರ್ನಾಟಕದ ಬೆಳಗಾವಿ, ಬಳ್ಳಾರಿ, ಕೊಪ್ಪಳ, ಗದಗ, ಹುಬ್ಬಳ್ಳಿ-ಧಾರವಾಡ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನಲ್ಲಿ ಭಾರೀ ಮಳೆಯಿಂದಾಗಿ ಬೆಳಗಲ್ ಗ್ರಾಮದಲ್ಲಿ ಅಂಗನವಾಡಿ ಜಲದಿಗ್ಭಂಧನವಾಗಿದೆ. ಅಂಗನವಾಡಿಯಲ್ಲಿನ ದವಸ, ಧಾನ್ಯಗಳು ನೀರುಪಾಲಾಗಿವೆ.