ಬೆಂಗಳೂರು : ರಾಜ್ಯಾದ್ಯಂತ ಮಳೆಯ ಅಬ್ಬರ ಮುಂದುವರೆದಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು, ಹಲವಡೆ ಸೇತುವೆಗಳು ಮುಳುಗಡೆಯಾಗಿದ್ದು, ಸಂಪರ್ಕ ಕಡಿತಗೊಂಡಿವೆ.

BIGG NEWS: ಭಟ್ಕಳದ ಮುಟ್ಟಳ್ಳಿಯಲ್ಲಿ ಮತ್ತೆ ಗುಡ್ಡ ಕುಸಿತ; ಗ್ರಾಮದ 10ಕ್ಕೂ ಹೆಚ್ಚು ಕುಟುಂಬಗಳು ಸ್ಥಳಾಂತರ

ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಭದ್ರಾ ನದಿ ಹರಿವಿನಲ್ಲಿ ಭಾರೀ ಏರಿಕೆ ಕಂಡುಬಂದಿದೆ. ಹೊರನಾಡು-ಕಳಸ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಮತ್ತೆ ಮುಳುಗಡೆಯಾಗಿದೆ.  ದಕ್ಷಿಣ ಕನ್ನಡದ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಹೆಚ್ಚಿದೆ. ಹಳೆ ಮೈಸೂರು ಭಾಗದಲ್ಲಿ ಸಣ್ಣಪುಟ್ಟ ನದಿಗಳು ಕೂಡ ಉಕ್ಕೇರುತ್ತಿವೆ. ಚಾಮರಾಜನಗರದ ಸುವರ್ಣಾವತಿ, ಚಿಕ್ಕಹೊಳೆ ಜೋಡಿ ಜಲಾಶಯಗಳು ತುಂಬಿ ಹರಿಯುತ್ತಿವೆ. ಹಲವೆಡೆ ಪ್ರವಾಹ ಪರಿಸ್ಥಿತಿ ಏರ್ಪಟ್ಟಿದೆ.

BIGG NEWS : ಕೇರಳದ ಮುನ್ನಾರ್‌ನ ಕುಂಡಲಾ ‘ಎಸ್ಟೇಟ್‌ನಲ್ಲಿ ಭೂಕುಸಿತ’ : 1 ದೇವಸ್ಥಾನ, 2 ಅಂಗಡಿಗಳಿಗೆ ಹಾನಿ

ಹಾವೇರಿ  ಜಿಲ್ಲೆಯಲ್ಲಿಯೂ ಮಳೆಯ ಆರ್ಭಟ ಮುಂದುವರೆದಿದ್ದು, ಹಾವೇರಿಯ ರಾಣೆಬೆನ್ನೂರು, ರಟ್ಟೀಹಳ್ಳಿ ಸೇರಿ ಹಲವೆಡೆ ಬೆಳೆ ಹಾನಿ. ಮೆಕ್ಕೆಜೋಳ ಬೆಳೆ ಕೆಂಪು ಬಣ್ಣಕ್ಕೆ ತಿರುಗಿ ಕೊಳೆತು ಹಾಳಾಗುತ್ತಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿಯಲ್ಲಿ ಕೆರೆ ಕಟ್ಟೆ ಒಡೆದಿದೆ.ದಾವಣಗೆರೆ-ಚನ್ನಗಿರಿ ಹೆದ್ದಾರಿಯಲ್ಲಿರುವ ಹದಡಿ ಕೆರೆ ಬಿರುಕು ಬಿಟ್ಟಿದ್ದು ಸಂಪರ್ಕ ಕಡಿತಗೊಂಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಭಟ್ಕಳ ತಾಲೂಕಿನ ಮುಟ್ಟಳ್ಳಿಯಲ್ಲಿ ಮತ್ತೆ ಗುಡ್ಡ ಕುಸಿತವಾಗಿದೆ. ಗುಡ್ಡ ಕುಸಿತ ಹಿನ್ನೆಲೆ ಗ್ರಾಮದ 10 ಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದ್ದು, ಗುಡ್ಡದ ಭಾಗದಲ್ಲಿ ರಸ್ತೆ ಸಂಚಾರ ಬಂದ್ ಮಾಡಲಾಗಿದೆ.

ತುಮಕೂರು ಜಿಲ್ಲೆಯಲ್ಲಿ ಮಳೆಯಿಂದ ಹಲವು ಮನೆಗಳಿಗೆ ನೀರು ನುಗ್ಗಿದ್ದು, ಜಿಲ್ಲೆಯ ದಿಬ್ಬೂರು ಹಾಗೂ ತುಮಕೂರು ನಗರಕ್ಕೆ ಸಂಪರ್ಕ ಮಾಡುವ ರಸ್ತೆ ಜಲಾವೃತವಾಗಿದ್ದು, ವಾಹನ ಸವಾರರು ಪರದಾಡುವಂತ್ತಾಗಿದೆ.

ವಿಜಯಪುರ ಜಿಲ್ಲೆಯಲ್ಲಿ ಡೋಣಿ ನದಿ ಪ್ರವಾಹ ಮುಂದುವರೆದಿದ್ದು, ತಾಳಿಕೋಟೆ ಪಟ್ಟಣದ ಹೊರ ಭಾಗದ ಡೋಣಿ ನದಿಯ ಹಳೆಯ ಸೇತುವೆ ಮುಳುಗಡೆಯಾಗಿದೆ. ಹೊಸ ಸೇತುವೆ‌ ಬಿರುಕು ಬಿಟ್ಟು ಬಿಳೋ ಹಂತಕ್ಕೆ ತಲುಪಿದ ಕಾರಣ ಅಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಮನಗೂಳಿ ದೇವಾಪೂರ ರಾಜ್ಯ‌ ಹೆದ್ದಾರಿ 61 ಬಂದ್ ಮಾಡಿದ್ದು, ವಿಜಯಪುರ ತಾಳಿಕೋಟೆ ಸಂಚಾರ ಸ್ಥಗಿತವಾಗಿದೆ.

Share.
Exit mobile version