ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ ಮಳೆ 13.81 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 13.15 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 2993.28 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2260.83 ಮಿ.ಮೀ ಮಳೆಯಾಗಿತ್ತು.
BIGG NEWS: ರೈತರ ಬಗ್ಗೆ ಹಗುರವಾಗಿ ಮಾತನಾಡಿದ ಕೆ.ಬಿ ಕೋಳಿವಾಡ; ಆಡಿಯೋ ವೈರಲ್
ಕೊಡಗು ಜಿಲ್ಲೆಯಲ್ಲಿ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ನಷ್ಟವಾಗಿದ್ದು,ಹಲವೆಡೆ ಮಳೆಯಿಂದಾಗಿ ರಸ್ತೆಗಳು ಕೊಚ್ಚಿ ಹೋಗಿವೆ. ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 16.95 ಮಿ.ಮೀ. ಕಳೆದ ವರ್ಷ ಇದೇ ದಿನ 10.50 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 4349.27 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3145.61 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 19.35 ಮಿ.ಮೀ. ಕಳೆದ ವರ್ಷ ಇದೇ ದಿನ 18.08 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2280.68 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1829.29 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 5.13 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 10.87 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 2349.88 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1807.59 ಮಿ.ಮೀ. ಮಳೆಯಾಗಿತ್ತು.
ಜಿಲ್ಲೆಯಲ್ಲಿ ಹೋಬಳಿವಾರು ದಾಖಲಾಗಿರುವ ಮಳೆ ವಿವರ:-ಮಡಿಕೇರಿ ಕಸಬಾ 5.60, ನಾಪೋಕ್ಲು 5.20, ಸಂಪಾಜೆ 41, ಭಾಗಮಂಡಲ 16, ವಿರಾಜಪೇಟೆ ಕಸಬಾ 18.20, ಹುದಿಕೇರಿ 38.40, ಶ್ರೀಮಂಗಲ 10, ಪೊನ್ನಂಪೇಟೆ 16, ಅಮ್ಮತ್ತಿ 19.50, ಬಾಳೆಲೆ 14, ಸೋಮವಾರಪೇಟೆ ಕಸಬಾ 5.60, ಶನಿವಾರಸಂತೆ 3.20, ಶಾಂತಳ್ಳಿ 17, ಕೊಡ್ಲಿಪೇಟೆ 5 ಮಿ.ಮೀ. ಮಳೆಯಾಗಿದೆ.
ಹಾರಂಗಿ ಜಲಾಶಯದ ನೀರಿನ ಮಟ್ಟ (09-09-2022) ವರದಿ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2856.63 ಅಡಿಗಳು. ಕಳೆದ ವರ್ಷ ಇದೇ ದಿನ 2858.06 ಅಡಿಗಳು. ಇಂದಿನ ನೀರಿನ ಒಳಹರಿವು 1907 ಕ್ಯುಸೆಕ್, ಕಳೆದ ವರ್ಷ ಇದೇ ದಿನ 4535 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 900 ಕ್ಯುಸೆಕ್. ನಾಲೆಗೆ 700 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 5113 ಕ್ಯುಸೆಕ್. ನಾಲೆಗೆ 600 ಕ್ಯುಸೆಕ್.