ಬೆಂಗಳೂರು : ಭಾರೀ ಮಳೆಯಿಂದಾಗಿ ತತ್ತರಿಸಿರುವ ರಾಜ್ಯದ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ನಾಳೆಯಿಂದ ಮತ್ತೆ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಹಲವು ಭಾಗಗಳಲ್ಲಿ ನಾಳೆಯಿಂದ ಚದುರಿದ ರೀತಿ ಮಳೆಯಾಗುವ ಸಾಧ್ಯತೆಗಳಿವೆ. ಶುಕ್ರವಾರ ಮತ್ತು ಶನಿವಾರ ರಾಜ್ಯದ ದಕ್ಷಿಣ ಒಳನಾಡು ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.
ಮಹಾರಾಷ್ಟ್ರದಲ್ಲಿ ಭಾರೀ ಮಳೆಯಿಂದಾಗಿ ಆಣೆಕಟ್ಟೆಗಳಿಂದ ನೀರು ಬಿಡುಗಡೆ ಮಾಡಲಾಗಿದ್ದು, ಕೃಷ್ಣಾ ಮತ್ತು ಭೀಮಾ ನದಿಗಳು ಉಕ್ಕಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳಿಗೆ ಪ್ರವಾಹದ ಆತಂಕ ಎದುರಾಗಿದೆ.
BIGG BREAKING NEWS : `PAYCM’ ಪೋಸ್ಟರ್ ಅಂಟಿಸಿದ ಕೇಸ್ : ಮೂವರನ್ನು ವಶಕ್ಕೆ ಪಡೆದ ಸಿಸಿಬಿ ಪೊಲೀಸರು