ಬೆಂಗಳೂರು : 2022 ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗೆ ಸಿಇಟಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಮಹತ್ವದ ಮಾಹಿತಿ ನೀಡಿದ್ದು, ಆಗಸ್ಟ್ 18 ರವರೆಗೆ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭಿಸುವುದಿಲ್ಲ ಎಂದು ಹೇಳಿದೆ.
Rain in Karnataka : ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಆರೆಂಜ್-ಯೆಲ್ಲೋ ಅಲರ್ಟ್’ ಘೋಷಣೆ
2021-22 ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ನಡೆದ ಅಂಕಗಳನ್ನು ಸಿಇಟಿಯಲ್ಲಿ ಪರಿಗಣಿಸದೇ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕ್ರಮ ಪ್ರಶ್ನಿಸಿ ಕೆಲವು ವಿದ್ಯಾರ್ಥಿಗಳು ಸಲ್ಲಿಸಿರುವ ರ್ಜಿಯ ಮುಂದಿನ ವಿಚಾರಣೆವರೆಗೆ 2022 ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗೆ ನೈಜ್ಯ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಗೆ ತಿಳಿಸಿದೆ.
ವಿದ್ಯಾರ್ಥಿಗಳ ತಕರಾರು ಅರ್ಜಿಗಳನ್ನು ನ್ಯಾಯಮೂರ್ತಿ ಎಸ್.ಆರ್. ಕೃಷ್ಣಕುಮಾರ್ ಅವರ ನ್ಯಾಯಪೀಠ ವಿಚಾರಣೆ ನಡೆಸಿದೆ. ಕೆಇಎ ಪರ ಸರ್ಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಧ್ಯಾನ್ ಚಿನ್ನಪ್ಪ 2020 ನೇ ಸಾಲಿನಲ್ಲಿ ವೃತ್ತಿಪರ ಕೋರ್ಸ್ ಗಳ ಪ್ರವೇಶಾತಿಗೆ ನೈಜ ಕೌನ್ಸೆಲಿಂಗ್ ಪ್ರಕ್ರಿಯೆ ಇನ್ನೂ ಆರಂಭವಾಗಿಲ್ಲ. ಸದ್ಯ ದಾಖಲೆ ಪರಿಶೀಲನೆ ಪ್ರಕ್ರಿಯೆ ಆರಂಭಿಕ ಹಂತದಲ್ಲಿದೆ. ಈ ಅರ್ಜಿ ಕುರಿತ ಮುಂದಿನ ವಿಚಾರಣೆವರೆಗೆ ಕೆಇಎ ನೈಜಕೌನ್ಸೆಲಿಂಗ್ ಪ್ರಕ್ರಿಯೆ ಆರಂಭಿಸುವುದಿಲ್ಲ ಎಂದು ನ್ಯಾಯಪೀಠಕ್ಕೆ ಹೇಳಿದ್ದಾರೆ.
Good News : ಹಾಲು ಉತ್ಪಾದಕರಿಗೆ ಭರ್ಜರಿ ಗುಡ್ ನ್ಯೂಸ್ : ಹಾಲಿನ ದರ ರೂ.1 ಹೆಚ್ಚಳ