ಧಾರವಾಡ : 2022-23 ನೇ ಸಾಲಿನಲ್ಲಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಮರು ಜಾರಿಗೊಳಿಸಲಾಗಿದ್ದು, ನವೆಂಬರ್ 1 ರಿಂದ ಸದಸ್ಯರ ನೋಂದಣಿ ಪ್ರಾರಂಭವಾಗಿರುತ್ತದೆ. ಗ್ರಾಮೀಣ ಸಹಕಾರ ಸಂಘಗಳ, ಸ್ವ-ಸಹಾಯ ಗುಂಪುಗಳ ಗರಿಷ್ಟ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ರೂ.500/- ಗಳ ವಂತಿಗೆ ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ ರೂ.100/-ಗಳನ್ನು ಪಾವತಿಸಬೇಕು. ನಗರ ಸಹಕಾರ ಸಂಘಗಳ ಗರಿಷ್ಠ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ರೂ.1,000/- ಗಳ ವಂತಿಗೆ ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ ರೂ.200/- ಗಳನ್ನು ಪಾವತಿಸಬೇಕು.
ಕ್ಯಾನ್ಸರ್ ರೋಗಿಗಳಲ್ಲಿ ಹೊಸ ಭರವಸೆ ಮೂಡಿಸಿದ 2 ಚಿಕಿತ್ಸೆಗಳು!… ಅವ್ಯಾವುವು, ಪ್ರಯೋಜನ? ತಿಳಿಯಿರಿ
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಸಹಾಯಧನ ನೀಡುವ ಮೂಲಕ ಅವರ ವಾರ್ಷಿಕ ಸದಸ್ಯತ್ವದ ವಂತಿಗೆಯನ್ನು ಸರ್ಕಾರವೇ ಭರಿಸುತ್ತದೆ.
ಹೆಚ್ಚಿನ ಮಾಹಿತಿಗಾಗಿ ಸದಸ್ಯತ್ವ ಹೊಂದಿದ ಸಹಕಾರ ಸಂಘಗಳು ಅಥವಾ ಸಹಕಾರ ಇಲಾಖೆಯ ಸಹಕಾರ ಸಿಂಧು ವೆಬ್ಸೈಟ್, ಕಚೇರಿ ದೂ.ಸಂ: 0836-2958634 ಸಂಪರ್ಕಿಸಬಹುದೆಂದು ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕ ನಿತಿನ್ ಮಾಡ್ಯಾಳ ಅವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.