ಬೆಂಗಳೂರು: 2021-21ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ 12-08-2022 ರಿಂದ 25-08-2022ರವರೆಗೆ ನಡೆಯಲಿದ್ದು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳ ಪರೀಕ್ಷಾ ಪ್ರವೇಶ ಪತ್ರಗಳನ್ನು ಆಯಾ ಪಿಯು ಕಾಲೇಜುಗಳ ಪ್ರಾಂಶುಪಾಲರ ಲಾಗಿನ್ ಗೆ ಬಿಡುಗಡೆ ಮಾಡಲಾಗಿದೆ.

BIGG NEWS: ಮನೆಯಲ್ಲೇ ಕುಳಿತು ಈ ರೀತಿ ಮತದಾರರ ಗುರುತಿನ ಚೀಟಿಗೆ ಆಧಾರ್ ನಂಬರ್ ಲಿಂಕ್ ಮಾಡಬಹುದು!

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಒಟ್ಟು 1,85,270 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಆಗಸ್ಟ್ 12 ರಿಂದ 25 ರವರೆಗೆ ಪರೀಕ್ಷೆ ನಡೆಯಲಿದೆ.  ಎಲ್ಲ ವಿದ್ಯಾರ್ಥಿಗಳ ಪ್ರವೇಶ ಪತ್ರವನ್ನು ಸ್ಟೂಡೆಂಟ್ ಅಚೀವ್ಮೆಂಟ್ ಟ್ರ್ಯಾಕಿಂಗ್ ಸಿಸ್ಟಮ್ ಪೋರ್ಟಲ್ ನ ಪ್ರಾಚಾರ್ಯರ ಲಾಗಿನ್ ಗೆ ಆಗಸ್ಟ್ 5 ರಂದು ಬಿಡುಗಡೆ ಮಾಡಲಾಗಿದೆ. ಪ್ರಾಚಾರ್ಯರು ಅವುಗಳನ್ನು ಡೌನ್ ಲೋಡ್ ಮಾಡಿಕೊಂಡು ವಿತರಿಸಬೇಕೆಂದು ಪದವಿಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.

Shocking: ಯುಪಿಯಲ್ಲಿ ಮಹಿಳಾ ಬ್ಯಾಂಕ್ ಮ್ಯಾನೇಜರ್ ಮೇಲೆ ದುಷ್ಕರ್ಮಿಗಳಿಂದ ಆಸಿಡ್ ದಾಳಿ…

ಹೀಗಿದೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ

ದಿನಾಂಕ 12-08-2022 – ಕನ್ನಡ, ಅರೇಬಿಕ್
ದಿನಾಂಕ 13-08-2022 – ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
ದಿನಾಂಕ 16-08-2022 – ಹಿಂದಿ
ದಿನಾಂಕ 17-08-2022 – ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ
ದಿನಾಂಕ 18-08-2022 – ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
ದಿನಾಂಕ 19-08-2022 -ಸ ರಾಜ್ಯ ಶಾಸ್ತ್ರ, ಗಣಿತ ಶಾಸ್ತ್ರ
ದಿನಾಂಕ 20-08-2022 – ತರ್ಕಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
ದಿನಾಂಕ 22-08-2022 – ಇಂಗ್ಲೀಷ್
ದಿನಾಂಕ 23-08-2022 – ಅರ್ಥಶಾಸ್ತ್ರ, ಜೀವಶಾಸ್ತ್ರ
ದಿನಾಂಕ 24-08-2022-ಇತಿಹಾಸ, ಸಂಖ್ಯಾಶಾಸ್ತ್ರ
ದಿನಾಂಕ 25-08-2022 – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

Share.
Exit mobile version