ಕೊಪ್ಪಳ : ಭಾರತೀಯ ಸೇನೆ/ ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ತರಬೇತಿಗಳನ್ನು ನೀಡಲಾಗುತ್ತಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಹೆದ್ದಾರಿ, ಜಿಲ್ಲಾ ರಸ್ತೆಗಳ ಬದಿ ಕಟ್ಟಡ ಅಂಕುಶಕ್ಕೆ ನಿಯಮ: ಸಚಿವ ಸಿ.ಸಿ.ಪಾಟೀಲ
ಭಾರತೀಯ ಸೇನೆ/ ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಯ ಅರ್ಹ ಅಭ್ಯರ್ಥಿಗಳಿಗೆ 2022-23ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ಉಚಿತ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡಲು ಸಮಾಜ ಕಲ್ಯಾಣ ಇಲಾಖೆಯು ಉದ್ದೇಶಿಸಿದ್ದು, ಕೊಪ್ಪಳ ಜಿಲ್ಲೆಯ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ನಿವಾಸಿಯಾಗಿರಬೇಕು. ಪರಿಶಿಷ್ಟ ಜಾತಿಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ರೂ. 5 ಲಕ್ಷದೊಳಗಿರಬೇಕು. ಅಭ್ಯರ್ಥಿಯು 2000ರ ಅಕ್ಟೋಬರ್ 01 ರಿಂದ 2005 ಏಪ್ರಿಲ್ 01ರ ನಡುವೆ ಜನಿಸಿರಬೇಕು. ಅಭ್ಯರ್ಥಿಯು 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಅಭ್ಯರ್ಥಿಗಳಿಗೆ ತರಬೇತಿಯನ್ನು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಯಾವುದಾದರೊಂದು ವಸತಿ ಶಾಲೆಯಲ್ಲಿ ನೀಡಲಾಗುತ್ತದೆ.
ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಅರ್ಜಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಆಗಷ್ಟ್ 15 ರೊಳಗಾಗಿ ತರಬೇತಿಗೆ ನಿಗದಿಪಡಿಸಿದ ಮೂರು ಜಿಲ್ಲೆಗಳ ಪೈಕಿ ಯಾವುದಾದರೊಂದು ಜಿಲ್ಲೆಯನ್ನು ಆಯ್ಕೆ ಮಾಡಿಕೊಂಡು ಆ ಜಿಲ್ಲೆಯ ಜಂಟಿ/ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಕಛೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಡೌನ್ಲೋಡ್ ಮಾಡಿಕೊಳ್ಳಲು ಇಲಾಖೆಯ ವೆಬ್ಸೈಟ್ https://sw.kar.nic.in ನ್ನು ಸಂಪರ್ಕಿಸಬಹುದು, ಎಂದು ಕೊಪ್ಪಳ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.