ಶಿವಮೊಗ್ಗ : ಮಲೆನಾಡು ಭಾಗದಲ್ಲಿ ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಲವೆಡೆ ರಸ್ತೆಗಳು ಕುಸಿದಿದ್ದು, ಜೋಗಫಾಲ್ಸ್ ಗೆ ಹೋಗುವವರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಹತ್ವದ ಮಾಹಿತಿ ನೀಡಿದೆ.
ಭಾರೀ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲ್ಲೂಕಿನ ಗೇರುಸೊಪ್ಪ ಸೂಳೆಮುರ್ಕಿ ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿ ಕುಸಿದಿದೆ. ಹೀಗಾಗಿ ಸುರಕ್ಷತೆಯ ದೃಷ್ಟಿಯಿಂದ ಗೇರುಸೊಪ್ಪ ಗ್ರಾಮದಿಂದ ಸಿದ್ದಾಪುರ ತಾಲ್ಲೂಕಿನ ಮಾವಿನಗುಂಡಿ ಗ್ರಾಮದವರೆಗೆ ರಸ್ತೆ ಸಂಚಾರ ನಿಷೇಧಿಸಲಾಗಿದೆ.
ಹೊನ್ನಾವರದಿಂದ ಸಿದ್ದಾಪುರ, ಜೋಗ, ಸಾಗರ ಕಡೆಗೆ ಹೋಗುವ ವಾಹನಗಳು ಹೊನ್ನಾವರ, ಕುಮಟಾ, ಸಂತೆಗುಳಿ ಮಾರ್ಗವಾಗಿ ಸಿದ್ದಾಪುರ ತಲುಪುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿದೆ.
BIGG NEWS : ಬೆಳೆಗಾವಿಯಲ್ಲಿ ಬಿಜೆಪಿ ಕಾರ್ಯಕರ್ತನ ಬರ್ಬರ ಕೊಲೆ : ಬೆಚ್ಚಿಬಿದ್ದ ಜನತೆ