ಬೆಂಗಳೂರು : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ಬಿಗ್ ಶಾಕ್ ನೀಡಿದ್ದು, ಸದ್ಯಕ್ಕೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಇಲ್ಲ ಎಂದು ಸ್ಪಷ್ಟಪಡಿಸಿದೆ.
BREAKING NEWS : `KPTCL’ ನೇಮಕಾತಿ ಅಕ್ರಮ ಹಗರಣ : ಪ್ರಮುಖ ಆರೋಪಿ ಅರೆಸ್ಟ್
ಚಳಿಗಾಲ ಅಧಿವೇಶನಕ್ಕೂ ಮುನ್ನ ಸಂಪುಟ ವಿಸ್ತರಣೆಯಾಗಲಿದೆ ಎಂಬ ಮಾತು ಕೇಳಿಬಂದಿದ್ದವು. ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಪ್ರಸ್ತಾಪಕ್ಕೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ತೋರಿಸಿಲ್ಲ. ಹೀಗಾಗಿ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಸ್ತಾಪಕ್ಕೆ ಬಹುತೇಕ ತೆರೆಬಿದ್ದಿದೆ.
ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಸಂಪುಟ ವಿಸ್ತರಣೆ ಸಂಬಂಧ ತಾವು ಪ್ರಸ್ತಾಪಿಸಿದ್ದು, ಅದರ ಅವಶ್ಯಕತೆ ಏನಿದೆ. ಈ ಬಗ್ಗೆ ಮತ್ತೊಮ್ಮೆ ಚರ್ಚಿಸಿ ತಿಳಿಸುವುದಾಗಿ ವರಿಷ್ಠರು ತಿಳಿಸಿದ್ದಾರೆ ಎಂದು ಹೇಳಿದ್ದಾರೆ. ಈ ಮೂಲಕ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಹೈಕಮಾಂಡ್ ಬಿಗ್ ಶಾಕ್ ನೀಡಿದೆ.
BIGG NEWS : ರೈತರಿಗೆ ಬಿಗ್ ಶಾಕ್ : ರಸಗೊಬ್ಬರ ಬೆಲೆಯಲ್ಲಿ ಭಾರೀ ಏರಿಕೆ|Fertilizer price hike