ಶಿವಮೊಗ್ಗ : ಶಿವಮೊಗ್ಗ ನಗರದಲ್ಲಿ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯೆ ನೀಡಿದ್ದು, ಕೆಲ ಮುಸ್ಲಿಂ ಗೂಂಡಾಗಳು ಅಶಾಂತಿ ವಾತಾವರಣ ಸೃಷ್ಟಿಸಿದ್ದಾರೆ ಎಂದು ಹೇಳಿದ್ದಾರೆ.
BIGG NEWS: ಬೆಂಗಳೂರಿನಲ್ಲಿ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಗಂಡನನ್ನೇ ಕೊಲೆ ಮಾಡಿದ ಪಾಪಿ ಹೆಂಡ್ತಿ
ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಪ್ರಕರಣ ಸಂಬಂಧ ಮೂವರನ್ನು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕೆಲ ಮುಸ್ಲಿಂ ಗೂಂಡಾಗಳು ಅಶಾಂತಿ ವಾತಾವರಣ ಸೃಷ್ಟಿಸಿದ್ದಾರೆ. ಅವರ ಪುಂಡಾಟಿಕೆ ಇನ್ನೂ ಕಡಿಮೆ ಆಗಿಲ್ಲ. ಪ್ರಕರಣದಲ್ಲಿ ಇನ್ನೂ ಇಬ್ಬರು ಆರೋಪಿಗಳ ಬಂಧಿಸುವುದಾಗಿ ಎಸ್ ಪಿ ಭರವಸೆ ನೀಡಿದ್ದಾರೆ ಎಂದರು.
ಇಂತಹವರ ವಿರುದ್ಧ ಕಠಿಣ ಶಿಕ್ಷೆಯನ್ನು ಜಾರಿಗೆ ತರಬೇಕು. ಈ ಬಗ್ಗೆ ನಾನು ಕೇಂದ್ರ ಗೃಹ ಸಚಿವರಿಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.