ಬೆಂಗಳೂರು : ರಾಜ್ಯಾದ್ಯಂತ ವರುಣಾರ್ಭಟ ಮುಂದುವರೆದಿದ್ದು, ಭಾರೀ ಮಳೆಯ ಹಿನ್ನೆಲೆಯಲ್ಲಿ ರಾಜ್ಯದ ಹಲವಡೆ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ.
BIGG NEWS : ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ಬಿಸಿಯೂಟದಲ್ಲಿ ರಾಗಿಮುದ್ದೆ, ಜೋಳದ ರೊಟ್ಟಿ!
ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಅಂಗನವಾಡಿ ಹಾಗೂ ಪ್ರೌಡ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಮಾಡಿ ತಹಶೀಲ್ದಾರ್ ಎಚ್.ಬಿ.ಜೈಕುಮಾರ್ ಅವರು ಆದೇಶ ಹೊರಡಿಸಿದ್ದಾರೆ.
ಇನ್ನು ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಭಾರೀ ಅವಾಂತರ ಸೃಷ್ಟಿಯಾಗಿದೆ. ಗ್ರಾಮೀಣ ಭಾಗ ಮತ್ತು ಬೆಟ್ಟ, ಗುಡ್ಡ ವ್ಯಾಪ್ತಿಯಲ್ಲಿ ಆತಂಕ ಸೃಷ್ಟಿಯಾಗಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮುಂಜಾಗ್ರತ ಕ್ರಮವಾಗಿ ಇಂದು ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.