ಬೆಂಗಳೂರು: ಕೆಫೆ ಬಾಂಬ್ ಸ್ಪೋಟಕ್ಕೆ ಸಂಬಂಧಪಟ್ಠಂತೆ ಮಹತ್ವದ ಮಾಹಿತಿ ಲಭ್ಯವಾಗಿದೆ ಅಂಥ ಗೃಹ ಸಚಿವ ಜಿ.ಪರಮೇಶ್ವರ್ ಅವರು ಹೇಳಿದ್ದಾರೆ.
ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ತೀರ ಹತ್ತಿರದಲ್ಲಿದ್ದು, ಮಹತ್ವದ ಮಾಹಿತಿ ಲಭ್ಯವಾಗಿದ್ದು, ಇನ್ನೇನು ಕೆಲವೇ ದಿನದಲ್ಲಿ ಬಂಧನ ಮಾಡಲಾಗುವುದು ಅಂಥ ಸಚಿವರು ಹೇಳಿದರು. ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಯ ಅಧಿಕಾರಿಗಳು ಮತ್ತು ಸಿಸಿಬಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ ಅಂಥ ಹೇಳಿದರು.