ಬೆಳಗಾವಿ : ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿಗಾಗಿ ನಾನು ಯಾವತ್ತೂ ವಿರೋಧ ಮಾಡಿಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಅಧಿಕಾರದಲ್ಲಿದ್ದಾಗಲೂ ಪಂಚಮಸಾಲಿ ಮೀಸಲಾತಿಗೆ ಎಂದೂ ವಿರೋಧ ಮಾಡಿಲ್ಲ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಪರ ಮಾತನಾಡಿದ್ದೇನೆ. ಪಂಚಮಸಾಲಿ ಸ್ವಾಮೀಜಿಗಳು ಯಾವ ಕಾರಣಕ್ಕೆ ಹೀಗೆ ಹೇಳಿದ್ದಾರೋ ಗೊತ್ತಿಲ್ಲ. ಶ್ರೀಗಳ ಜೊತೆಗೆ ನಾನು ವೈಯಕ್ತಿವಾಗಿ ಮಾತನಾಡುತ್ತೇನೆ. ಪಂಚಮಸಾಲಿ ಮೀಸಲಾತಿ ವಿಚಾರ ಸಿಎಂ ಬಸವರಾಜ ಬೊಮ್ಮಾಯಿ ಜೊತೆಗೂ ಮಾತನಾಡುತ್ತೇನೆ ಎಂದರು.
BIGG NEWS: ಕೊಪ್ಪಳದಲ್ಲಿ ಕೋಳಿ ಜೂಜಾಟ; ಬಿಜೆಪಿ ಮುಖಂಡನ ವಿರುದ್ಧ ಎಫ್ಐಆರ್