ಮೈಸೂರು : ರಾಜ್ಯ ಕಾಂಗ್ರೆಸ್ ನಲ್ಲಿ ಈಗಾಗಲೇ ಮುಖ್ಯಮಂತ್ರಿ ಕುರ್ಚಿಗೆ ಪೈಪೂಟಿ ಶುರುವಾಗಿದ್ದು, ಈ ನಡುವೆ ಕಾಂಗ್ರೆಸ್ ನ ಮತ್ತೊಬ್ಬ ನಾಯಕರು ನಾನೂ ಮುಖ್ಯಮಂತ್ರಿ ಆಗ್ತೀನಿ ಎಂದು ಹೇಳಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಅವರ 75 ನೇ ವರ್ಷದ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಅಮೃತ ಮಹೋತ್ಸವದ ಪೂರ್ವಭಾವಿ ಸಭೆಯ ಭಾಷಣದಲ್ಲಿ ಕಾಂಗ್ರೆಸ್ ನಾಯಕ ಹೆಚ್.ಸಿ.ಮಹಾದೇವಪ್ಪ ಅವರು ಬಾಯಿತಪ್ಪಿ ನಾನೂ ಮುಖ್ಯಮಂತ್ರಿ ಪದ ಬಳಕೆ ಮಾಡಿದ್ದಾರೆ. ನಾನೇ ಮುಂದಿನ ಸಿಎಂ ಎನ್ನುತ್ತ ಭಾಷಣ ಆರಂಭಿಸಿದ್ದಾರೆ. ನಾನೂ ಮುಖ್ಯಮಂತ್ರಿ ಆಗ್ತೇನೆ ಎಂದು ಹೇಳಿದ್ದಾರೆ.
ಬಳಿಕ ಎಲ್ಲರೂ ಇದನ್ನೇ ಹೇಳುತ್ತಿದ್ದಾರೆ. ಹೀಗಾಗಿ ನನ್ನ ತಲೆಗೂ ಬಂತು. ಬಾಯಿ ತಪ್ಪಿ ನಾನು ಅದನ್ನು ಹೇಳಿದೆ ಎಂದು ಹಾಸ್ಯ ಚಟಾಕಿ ಹಾರಿಸಿದ್ದಾರೆ.