ತುಮಕೂರು : ಚುನಾವಣೆ ಹೊತ್ತಲ್ಲೇ ಪಕ್ಷಾಂತರ ಪರ್ವ ಶುರುವಾಗಿದ್ದು, ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಮತ್ತು ಹೆಚ್ ಡಿ ಕುಮಾರಸ್ವಾಮಿ ನಡುವಿನ ಸಂಬಂಧ ಅಣ್ಣತಮ್ಮಂದಿರಂತಿತ್ತು. ಸುಮಾರು ಒಂದೂವರೆ ವರ್ಷಗಳ ಹಿಂದೆ ಆ ಸಂಬಂಧಕ್ಕೆ ಯಾರೋ ಹುಳಿ ಹಿಂಡಿದರು. ಹೀಗಾಗಿ ಇಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತೇನೆ ಎಂದು ಹೇಳಿದರು.
ಇಂದು ಬೆಂಗಳೂರಿಗೆ ತೆರಳಿ ಸ್ಪೀಕರ್‌ಗೆ ರಾಜಿನಾಮ ಪತ್ರವನ್ನು ಸಲ್ಲಿಸಲಿಸುತ್ತೇನೆ. ಕಾಂಗ್ರೆಸ್‌ನಿಂದ ಟಿಕೆಟ್ ಸಿಗುವುದು ಖಚಿತವಾಗಿರುವ ಹಿನ್ನೆಲೆಯಲ್ಲಿ ಗುಬ್ಬಿ ಕ್ಷೇತ್ರದಿಂದಲೇ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ.
WATCH VIDEO: ಹುಟ್ಟಿದ ತಕ್ಷಣವೇ ʻಅಮ್ಮʼನನ್ನು ತಬ್ಬಿ ಹಿಡಿದ ಕಂದಮ್ಮ; ಹೃದಯಸ್ಪರ್ಶಿ ವಿಡಿಯೋ ವೈರಲ್
BIG NEWS : ದಾವಣಗೆರೆ ಜಿಲ್ಲೆಯ ʼಚನ್ನಗಿರಿ ಅಡಿಕೆ ಮರಗಳಿಗೆ ವಿಚಿತ್ರ ರೋಗಬಾಧೆʼ : ರೈತರಿಗೆ ಸಂಕಷ್ಟ, ಕಂಗಾಲು