ಮೈಸೂರು: ಇನ್ಮುಂದೆ ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ. ನಿರ್ಮಿಸಿದರೆ ಅದನ್ನು ಒಡೆಸಿ ಹಾಕೊದು ಗ್ಯಾರೆಂಟಿ ಎಂದು ಸಂಸದ ಪ್ರತಾಪ ಸಿಂಹ ಎಚ್ಚರಿಕೆ ನೀಡಿದರು.
BIGG NEWS: ಮುಂದಿನ ವಾರದಿಂದ ಪ್ರತಿ ಕ್ಷೇತ್ರದಲ್ಲೂ ಒಂದೊಂದು ದಿನ ಪ್ರವಾಸ ಮಾಡುತ್ತೇನೆ : ಹೆಚ್.ಡಿ ದೇವೇಗೌಡ
ಮೈಸೂರಿನ ರಂಗಾಯಣದಲ್ಲಿ ಟಿಪ್ಪು ನಿಜ ಕನಸುಗಳು ನಾಟಕದ ವೇಳೆ ಸಂಸದ ಪ್ರತಾಪ್ ಸಿಂಹ ಮಾಡಿದ್ದ ಭಾಷಣ ವೈರಲ್ ಆಗಿದೆ. ಗುಂಬಜ್ ಮಾದರಿಯಲ್ಲಿ ಬಸ್ ನಿಲ್ದಾಣ ನಿರ್ಮಿಸುವಂತಿಲ್ಲ. ಒಂದು ವೇಳೆ ನಿರ್ಮಿಸಿದರೆ ಒಡೆದು ಹಾಕುವುದು ನಿಶ್ಚಿತ ಎಂಬ ಸಂಸದ ಪ್ರತಾಪ್ ಸಿಂಹ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇನ್ನು ಇತಿಹಾಸದಲ್ಲೇ ಮೊದಲ ಬಾರಿಗೆ ರೈಲ್ವೆ ಇಲಾಖೆಯಲ್ಲಿ ರೈಲಿನ ಹೆಸರು ಬದಲಾಯಿಸಿದ್ದೇನೆ. ನಾಲ್ಕು ವರ್ಷ ಸತತ ಪ್ರಯತ್ನ ಮಾಡಿ ಹೆಸರು ಬದಲಾವಣೆ ಮಾಡಿದ್ದೇನೆ. ಮೈಸೂರಿನ ಪ್ರತಿಯೊಂದು ಸಂಕೇತವೂ ಮಹಾರಾಜರ ಕೊಡುಗೆ. ರೈಲ್ವೆ ಸ್ಟೇಷನ್ ಗೆ ಚಾಮರಾಜ ಒಡೆಯರ್ ಹೆಸರು ಇಡುತ್ತೇವೆ ಹೊರತು ಟಿಪ್ಪುವಿನ ಯಾವ ಗುರುತುಗಳು ಸಿಗದ ಹಾಗೇ ಮಾಡುತ್ತೇವೆ ಎಂದು ಕಿಡಿಕಾರಿದ್ದಾರೆ.