ಬೆಂಗಳೂರು : ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ಪಡೆದು ನ್ಯಾ.ಎ.ಜೆ.ಸದಾಶಿವ ಆಯೋಗ ವರದಿ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಒಳಮೀಸಲಾತಿ ಜಾರಿಗೆ ಶಿಫಾರಸು ಮಾಡಿರುವ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಜಾರಿಗೆ ತರುತ್ತೇವೆ ಎಂದು ಅಧಿಕಾರಕ್ಕೆ ಬಂದಿರುವ ರಾಜ್ಯದ ಬಿಜೆಪಿ ಸರ್ಕಾರ ಈಗ ಹೋರಾಟಗಾರರನ್ನೇ ಬಂಧಿಸಲು ಹೊರಟಿರುವುದು ವಿಷಾದನೀಯ ಎಂದಿದ್ದಾರೆ.
ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ಪಡೆದು ನ್ಯಾ.ಎ.ಜೆ.ಸದಾಶಿವ ಆಯೋಗ ವರದಿ ಜಾರಿಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ. 4/4#SocialJustice
— Siddaramaiah (@siddaramaiah) December 11, 2022
ಬೆಂಗಳೂರಿನಲ್ಲಿ ಒಳ ಮೀಸಲಾತಿಗಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಿರುವವರನ್ನು ರಾಜ್ಯ ಬಿಜೆಪಿ ಸರ್ಕಾರ ಬಂಧಿಸಿರುವುದು ಅತ್ಯಂತ ಖಂಡನೀಯ. ತಕ್ಷಣ ಅವರನ್ನು ಬಿಡುಗಡೆಗೊಳಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರ ಒಂದೋ ಹೋರಾಟಗಾರರ ನ್ಯಾಯಬದ್ದ ಬೇಡಿಕೆಯನ್ನು ಈಡೇರಿಸಬೇಕು, ಇಲ್ಲವಾದರೆ ಕನಿಷ್ಠ ಅವರನ್ನು ಮಾತುಕತೆಗಾದರೂ ಆಹ್ಹಾನಿಸಬೇಕಾಗಿತ್ತು. ಇದ್ಯಾವುದನ್ನು ಮಾಡದೆ ಹೋರಾಟಗಾರರನ್ನು ಪೊಲೀಸರ ಮೂಲಕ ಹಣಿಯಲು ನಡೆಸಿದ ಪ್ರಯತ್ನ ಪ್ರಜಾಪ್ರಭುತ್ವ ವಿರೋಧಿಯಾದುದು ಎಂದು ಹೇಳಿದ್ದಾರೆ.