ಬೆಂಗಳೂರು : ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ನೇಮಕಾತಿಯಲ್ಲಿ ನಡೆದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಯಲ್ಲಿ ಸ್ಪೋಟಕ ಮಾಹಿತಿಯೊಂದು ಹೊರಬಿದ್ದಿದ್ದು, ಸರ್ಕಾರಿ ಪ್ರೌಢಶಾಲಾ ಶಿಕ್ಷಕರ ಹುದ್ದೆಗಳನ್ನು 2012-13 ಮತ್ತು 2014-15ರಲ್ಲಿ ತಲಾ 5 ರಿಂದ 10 ಲಕ್ಷ ರೂ.ಗೆ ಮಾರಾಟ ಮಾಡಲಾಗಿದೆ ಎಂದು ಸಿಐಡಿ ತನಿಖೆಯಿಂದ ತಿಳಿದುಬಂದಿದೆ.
BIGG NEWS : ಪಾಕಿಸ್ತಾನ – ಹಿಂದೂಸ್ತಾನ ಒಡೆದವರು ಕಾಂಗ್ರೆಸ್ಸಿಗರು : ಕೆ.ಎಸ್ ಈಶ್ವರಪ್ಪ ವಾಗ್ವಾಳಿ
ಉನ್ನತ ಮೂಲಗಳ ಪ್ರಕಾರ, ಸರ್ಕಾರಿ ಪ್ರೌಢಶಾಲೆ ಶಿಕ್ಷಕರ ನೇಮಕಾತಿಗೆ ಕೆಲ ಅಭ್ಯರ್ಥಿಗಳು 5 ರಿಂದ 10 ಲಕ್ಷ ರೂ. ಲಂಚ ನೀಡಿದ್ದಾರೆ. ಸಿಐಡಿ ವಶದಲ್ಲಿರುವ ಮಹಿಳಾ ಅಭ್ಯರ್ಥಿಯೊಬ್ಬರು, ಕೆಲಸ ಮಾಡಲು 15 ಲಕ್ಷ ರೂ.ಗಳನ್ನು ಪಾವತಿಸಿದ್ದಾರೆ ಎಂದು ತನಿಖೆಯ ವೇಳೆ ಬಹಿರಂಗಪಡಿಸಿದ್ದಾರೆ ಎನ್ನಲಾಗಿದೆ.
ತುಮಕೂರು, ವಿಜಯಪುರ ಹಾಗೂ ಕೋಲಾರ ಜಿಲ್ಲೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿರುವುದು ದಾಖಲೆಗಳಿಂದ ಗೊತ್ತಾಗಿದೆ’ ಎಂದಿವೆ. ಈ ಜಿಲ್ಲೆಯಲ್ಲಿ ಅಕ್ರಮವಾಗಿ ಹುದ್ದೆಗೆ ಆಯ್ಕೆಯಾಗಲು ಸಹ ಶಿಕ್ಷಕರು, ತಲಾ ₹ 5 ಲಕ್ಷದಿಂದ ₹ 10 ಲಕ್ಷ ನೀಡಿರುವುದು ಪತ್ತೆಯಾಗಿದೆ. ಈ ಹಣವನ್ನು ಹಂತ ಹಂತವಾಗಿ ಪಾವತಿಸಲಾಗಿದೆ ಎಂದು ಹೇಳಳಾಗುತ್ತಿದೆ.
ಶಾಲಾ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗಿಯಾಗಿರುವ ಶಂಕೆಯಿದ್ದು, 10 ವರ್ಷಗಳಿಗೂ ಹೆಚ್ಚು ಕಾಲ ಒಂದೇ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಒಬ್ಬರನ್ನು ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ವಶಕ್ಕೆ ತೆಗೆದುಕೊಳ್ಳಲಾಗಿದೆ.
ಶಾಲಾ ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಈವರೆಗೆ ಸಿಐಡಿ 11 ಶಿಕ್ಷಕರನ್ನು ವಶಕ್ಕೆ ತೆಗೆದುಕೊಂಡಿದೆ , ಕೆಲವರನ್ನು ಕಾನೂನುಬಾಹಿರವಾಗಿ ನೇಮಕ ಮಾಡಲಾಗಿದೆ. ಕೆಲವು ಅಧಿಕಾರಿಗಳು ಸಹ ಸಿಐಡಿ ವಶದಲ್ಲಿದ್ದಾರೆ.
BIGG NEWS: ಇಂದು ಕೆಪಿಸಿಸಿ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ; ಡಿ.ಕೆ ಶಿವಕುಮಾರ್ ಮುಂದುವರಿಕೆ ಬಹುತೇಕ ಖಚಿತ