ಬೆಂಗಳೂರು : ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ವೋಟರ್ ಐಡಿ ಪರಿಷ್ಕರಣೆ ಅಕ್ರಮ ನ್ಯಾಯಾಂತ ತನಿಖೆಯಾಗಲಿ ಎಂದು ಒತ್ತಾಯಿಸಿದ್ದಾರೆ.
BIGG NEWS : 1 ದಶಕದಲ್ಲಿ ಬೆಂಗಳೂರು ಜನಸಂಖ್ಯೆ 2.5 ಕೋಟಿಗೆ ಏರಿಕೆ : ಬಿಬಿಎಂಪಿ ಘೋಷಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣವನ್ನು ಮುಖ್ಯನ್ಯಾಯಮೂರ್ತಿ ನೇತೃತ್ವದಲ್ಲಿ ರಾಜ್ಯ ಸರ್ಕಾರ ತನಿಖೆ ನಡೆಸಲಿ. ನಮ್ಮ ಕಾಲದಲ್ಲಿ ನಡೆದಿತ್ತು, ಇವರ ಕಾಲದಲ್ಲಿ ನಡೆದಿತ್ತು ಎಂಬ ಹೇಳಿಕೆಗಳು ಕೇಳಿಬರುತ್ತಿವೆ. ಈಗ ನಾವು ಮೊದಲು ದೂರು ನೀಡಿದ್ದೇವೆ. ತನಿಖೆ ನಡೆಸಲಿ ಎಂದು ಆಗ್ರಹಿಸಿದ್ದಾರೆ.
BREAKING NEWS: ‘ಭಾರತ್ ಜೋಡೋ ಯಾತ್ರೆ’ ವೇಳೇ ಬಾಂಬ್ ಸ್ಪೋಟಿಸಿ ಕೊಲ್ಲುವುದಾಗಿ ರಾಹುಲ್ ಗಾಂಧಿಗೆ ಪತ್ರ
ಒಂದು ಸಂಸ್ಥೆ ದುಡ್ಡು ಇಲ್ಲದೇ ಕೆಲಸ ಮಾಡುತ್ತಿದೆ. ಸಿಎಂ, ಬಿಬಿಎಂಪಿ ಆಯುಕ್ತರ ಅನುಮತಿ ಇಲ್ಲದೇ ಮಾಡುತ್ತಾ? ಸರ್ಕಾರ, ಪಾಲಿಕೆಗೆ ಗೊತ್ತಿಲ್ಲದೇ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲು ಆಗುತ್ತಾ? ಎಂದು ಪ್ರಶ್ನಿಸಿದ್ದಾರೆ.