ಬೆಂಗಳೂರು : ರಾಜ್ಯದ ಎಲ್ಲಾ ಗ್ರಾ.ಪಂಗಳಲ್ಲಿ ಪಂಚತಂತ್ರ 2.0 ತಂತ್ರಾಂಶದ ಫೈನಾನ್ಸ್ & ಅಕೌಟಿಂಗ್ ಮತ್ತು Hrms ಮಾಡ್ಯೂಲಗಳ ಅನುಷ್ಟಾನ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಗ್ರಾಮ ಪಂಚಾಯಿತಿಗಳ ಪ್ರತಿನಿತ್ಯದ ಕಾರ್ಯಗಳನ್ನು ಮತ್ತು ಕಾರ್ಯಚಟುವಟಿಕೆಗಳನ್ನು ಮೇಲ್ವಿಚಾರಣೆ ಮಾಡಲು ಸೇವೆಗಳ ವಿಲೇವಾರಿಗೆ ಬೇಕಾದ ಯೋಜನೆಗಳ ಅನುಷ್ಠಾನ ಮತ್ತು ತೀರ್ಮಾನಗಳನ್ನು ಕೈಗೊಳ್ಳವಲ್ಲಿ ಮತ್ತು ಗ್ರಾಮ ಪಂಚಾಯಿತಿಗಳಲ್ಲಿ 2011 ರಿಂದ ಬಳಸಲಾಗುತ್ತಿರುವ ಪಂಚತಂತ್ರ ತಂತ್ರಾಂಶವನ್ನು ಉನ್ನತೀಕರಣಗೊಳಿಸಿ ಪಂಚತಂತ್ರ 2.0 ತಂತ್ರಾಂಶವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಅಭಿವೃದ್ಧಿಪಡಿಸಲಾಗಿದೆ.
ಪ್ರಸ್ತುತ ಪಂಚತಂತ್ರ 2.0 ತಂತ್ರಾಂಶದ ಫೈನಾನ್ಸ್ & ಅಕೌಟಿಂಗ್ ಮತ್ತು Hrms ಮಾಡ್ಯೂಲಗಳನ್ನು ಅಭಿವೃದ್ಧಿಪಡಿಸಲಾಗಿದ್ದು, ಸದರಿ ಮಾಡ್ಯಲ್ ಗಳನ್ನು ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.