ಬೆಂಗಳೂರು : ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraja Bommai) ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ (Cabinet Meeting) ನಡೆಯಲಿದ್ದು, ಸಭೆಯಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ಹಾಗೂ 50:50 ರೂಲ್ಸ್ ಜಾರಿಗೆ ತರಲಾಗಿದ್ದು, ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಕಠಿಣ ನಿಯಮ ಜಾರಿ ಮಾಡುವ ಸಂಬಂಧ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಹಾಗೂ ಒಮಿಕ್ರಾನ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವೀಕೆಂಡ್ ಕರ್ಪ್ಯೂ, ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ.